ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವನೋರ್ವನನ್ನು ಬಡಿಗೆಗಳಿಂದ ಮನಬಂದಂತೆ ಥಳಿಸಿರುವ ಘಟನೆ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿ ಇತ್ತೀಚೆಗೆ ನಡೆದಿದ್ದು, ಹಲ್ಲೆ ಮಾಡುವ ಭಯಾನಕ ಎಕ್ಸ್ ಕ್ಲೂಸಿವ್ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ.
ಗುರುಪಾದ ಹಲ್ಲೆಗೊಳಗಾದ ಯುವಕ. ಗುರುಪಾದ ಜೇವರ್ಗಿಯ ರೇವನೂರ ಗ್ರಾಮದ ನಿವಾಸಿಯಾಗಿದ್ದು, ಅದೇ ಗ್ರಾಮದ ಮಹಾತೇಂಶ್ ಹಾಗೂ ಆತನ ಗ್ಯಾಂಗ್ ಹಲ್ಲೆ ಮಾಡಿದ್ದಾರೆ. ಮಹಾತೇಂಶ್ ಹಗೂ ಆತನ ಗ್ಯಾಂಗ್ ಗುರುಪಾದ್ ಮೇಲೆ ಕಲ್ಲು ಚಪ್ಪಡಿ ಹಾಕಿ ದೊಣ್ಣೆಯಿಂದ ಕಂಡಕಂಡಲ್ಲಿ ಬಾರಿಸಿದ್ದಾರೆ. ಒಬ್ಬನ ಮೇಲೆ ಮೃಗಗಳ ರೀತಿಯಲ್ಲಿ ಆರು ಜನ ಪುಂಡರು ಮುಗಿಬಿದ್ದಿದ್ದಾರೆ.
ಹಲ್ಲೆ ಮಾಡುವ ವಿಡಿಯೋವನ್ನು ಕಲಬುರಗಿಯ ರೌಡಿಗಳ ಗುಂಪಿನಲ್ಲಿ ಕಿಡಿಗೇಡಿಗಳು ಹರಿಬಿಟ್ಟು ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸದ್ಯ ಯುವಕನ ಹಲ್ಲೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.
ಯುವಕರು ಗುರುಪಾದ ಮೇಲೆ ಹಲ್ಲೆ ಮಾಡುವ ದೃಶ್ಯ ಕಂಡು ಕಲಬುರಗಿಯ ಹಿರಿಯ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಆದ್ರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews