ಪೋರ್ಟ್ ಬ್ಲೇರ್: ಸಾಮೂಹಿಕ ಅತ್ಯಾಚಾರದ (Gang Rape) ಆರೋಪ ಎದುರಿಸುತ್ತಿರುವ ಅಂಡಮಾನ್ ಮತ್ತು ನಿಕೋಬಾರ್ (Andaman and Nicobar) ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೇನ್ (Jitendra Narain) ಅವರನ್ನು ಬಂಧಿಸಲಾಗಿದೆ. ಅವರಿಗೆ ಪೋರ್ಟ್ ಬ್ಲೇರ್‌ನಲ್ಲಿ (Port Blair) ಸಮನ್ಸ್ ನೀಡಿದ ಬಳಿಕ ವಿಚಾರಣೆಗೆ ಹಾಜರಾಗಿದ್ದರು ಹಾಗೂ ತನಿಖೆಗೆ ಒಳಗಾಗಿದ್ದರು.
ಜಿತೇಂದ್ರ ನರೇನ್ ಅವರು ಕಾರ್ಯದರ್ಶಿಯಾಗಿದ್ದಾಗ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ ವರದಿಯನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಯಡಿಯೂರಪ್ಪ ಹಿಂದೂ ಅಲ್ಲ, ವೀರಶೈವ ಲಿಂಗಾಯತರು: ಸಾಗರನಹಳ್ಳಿ ನಟರಾಜ್
ನರೇನ್ ಹಾಗೂ ಇನ್ನೊಬ್ಬ ಅಧಿಕಾರಿ ಆರ್.ಎಲ್ ರಿಷಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ 21 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆ ಕಳೆದ ತಿಂಗಳು ಜಿತೇಂದ್ರ ನರೇನ್ ಅವರನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿತ್ತು. ಇದನ್ನೂ ಓದಿ: ನಾಳೆ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ – ಇಂದು ಸ್ಥಳ ಪರಿಶೀಲಿಸಿದ ಸಿಎಂ