– ಮತ್ತೋರ್ವ ಅಪ್ರಾಪ್ತನಿಗಾಗಿ ಶೋಧ
ಬೆಳಗಾವಿ: ಹದಿನೈದು ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ (Belagavi) ಹೊರ ವಲಯದ ರೆಸಾರ್ಟ್‌ನಲ್ಲಿ (Resort) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಘಟನೆ ನಡೆದಿದ್ದು, ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದನ್ನೂ ಓದಿ: ನೀರಿನ ಬಾಟಲಿಗೆ 1 ರೂ. ಜಿಎಸ್‌ಟಿ – ರೆಸ್ಟೋರೆಂಟ್‌ಗೆ 8 ಸಾವಿರ ದಂಡ
ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಸಾಕೀಬ್ ಮತ್ತು ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಅಪ್ರಾಪ್ತ ಬಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್