ಜೈಪುರ್: ಉದ್ಯೋಗ ಕೊಡಿಸುವ ನೆಪದಲ್ಲಿ ಸುಮಾರು 20 ಮಹಿಳೆಯರನ್ನು ವಂಚಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ರಾಜಸ್ಥಾನದ (Rajastan) ಸಿರೋಹಿ ಮುನ್ಸಿಪಲ್ ಕೌನ್ಸಿಲ್‌ನ ಅಧ್ಯಕ್ಷ ಮಹೇಂದ್ರ ಮೇವಾಡ ಮತ್ತು ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿಗಳು ಸುಮಾರು 20 ಕ್ಕೂ ಹೆಚ್ಚು ಮಹಿಳೆಯರಿಗೆ ಅಂಗನವಾಡಿ (Aganvadi) ಕೇಂದ್ರಗಳಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೈತ್ರಿ ಧರ್ಮ ಪಾಲಿಸಿ: ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ
Advertisement
Advertisement
ದೂರುದಾರರ ಪ್ರಕಾರ, ಸಂತ್ರಸ್ತೆ ಇತರ ಮಹಿಳೆಯರೊಂದಿಗೆ ಅಂಗನವಾಡಿಯಲ್ಲಿ ಕೆಲಸಕ್ಕಾಗಿ ಕೆಲವು ತಿಂಗಳ ಹಿಂದೆ ಸಿರೋಹಿಗೆ ಪ್ರಯಾಣಿಸಿದ್ದರು. ಸಂತ್ರಸ್ತೆಗೆ, ಆರೋಪಿಗಳು ವಸತಿ ಮತ್ತು ಊಟದ ಸೌಕರ್ಯವನ್ನು ಒದಗಿಸಿದ್ದಾರೆ. ಆದರೆ ಆರೋಪಿಗಳು ನೀಡಿದ ಊಟದಲ್ಲಿ ನಿದ್ರೆ ಮಾತ್ರೆ ಹಾಕಿಕೊಟ್ಟಿದ್ದು, ಅದನ್ನು ಸೇವಿಸಿದ ನಂತರ ಮಹಿಳೆ ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಆರೋಪಿಗಳು ಆಕೆಯ ಮೇಲೆ ಆತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳ ಗಡಿ ಮುಟ್ಟಲಿದೆ: ಪ್ರಧಾನಿ ಮೋದಿ
Advertisement
Advertisement
ಸಂಸ್ರಸ್ತೆಗೆ ಪ್ರಜ್ಞೆ ಬಂದ ನಂತರ ಆರೋಪಿಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಅವರು ಮೋಸ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳು ಮಹಿಳೆಯರ ಮೇಲೆ ಆತ್ಯಾಚಾರವೆಸಗಿ ಅದನ್ನು ವೀಡಿಯೋ ಮಾಡಿಕೊಂಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಕೆ ಹಾಕಿ ಸಂತ್ರಸ್ತೆಯರಿಂದ ತಲಾ 5 ಲಕ್ಷ ರೂ. ನೀಡುವಂತೆ ಹೇಳಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಅರವಿಂದ್ ಕೇಜ್ರಿವಾಲ್ ಭೇಟಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸುಳ್ಳು ದೂರುಗಳನ್ನು ಮಹಿಳೆಯರು ದಾಖಲಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಪರಾಸ್ ಚೌಧರಿ ಹೇಳಿದ್ದರು. ಇದೀಗ ಎಂಟು ಮಹಿಳೆಯರ ಅರ್ಜಿಯ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ ಆದೇಶಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ನನಗೆ ನಾನೇ ಹೈಕಮಾಂಡ್: ಕೆ.ಎನ್ ರಾಜಣ್ಣ