ಬೆಳಗಾವಿ: ಬಿಯರ್ (Beer) ಕುಡಿಸಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
8 ತಿಂಗಳ ಅವಧಿಯಲ್ಲಿ ಪ್ರಕರಣ ಇತ್ಯರ್ಥಗೊಳಿಸಿ ನಾಲ್ವರಿಗೆ ಕಠಿಣ ಶಿಕ್ಷೆ ಪ್ರಕಟಿಸಲಾಗಿದೆ. ಸಾಕೀಬ್ ನಿಜಾಮಿ (22), ರವಿ ನಾಯ್ಯೋಡಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 8.76 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್, ಅಶುತೋಷ್ ಪಾಟೀಲ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಈ ಇಬ್ಬರಿಗೂ 6 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಸಿ.ಎಂ ಪುಷ್ಪಲತಾ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತೆಗೆ 10 ಲಕ್ಷ ಪರಿಹಾರ ನೀಡುವಂತೆ ಕಾನೂನು ಪ್ರಾಧಿಕಾರಕ್ಕೂ ಸೂಚಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ – ಪ್ರೀ ಪ್ಲ್ಯಾನ್ಡ್ ಮರ್ಡರ್ ಅಂತ ಕುಟುಂಬ ಆರೋಪ
2025 ಮೇ 10ರಂದು ಬೆಳಗಾವಿಯ ಸಾವಗಾಂವ್ ಫಾರ್ಮ್‌ಹೌಸ್‌ನಲ್ಲಿ ಗ್ಯಾಂಗ್ ರೇಪ್ ನಡೆದಿತ್ತು. ಅಪ್ರಾಪ್ತೆ ಎಂದು ಗೊತ್ತಿದ್ದರೂ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅಪ್ರಾಪ್ತೆಯ ಚಿನ್ನದ ಸರ ಎಗರಿಸಿದ್ದರು. ಈ ಸಂಬಧ ಸಂತ್ರಸ್ತೆಯ ಪೋಷಕರು ಬೆಳಗಾವಿಯ ಟಿಳಕವಾಡಿ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಟಿಳಕವಾಡಿಯಿಂದ ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ಸರ್ಕಾರದ ಪರ ವಿಶೇಷ ಅಭಿಯೋಜಕ ಎಲ್.ವಿ ಪಾಟೀಲ ವಕಾಲತ್ತು ನಡೆಸಿದರು. ಇದನ್ನೂ ಓದಿ: 2017 ರ ಸೆಕ್ಸ್ ಸಿಡಿ ಪ್ರಕರಣ – ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್

