ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯ (Dalit Girl) ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ (Gang Rape) ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ (Lucknow) ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಆಹಾರ ಮಳಿಗೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಬಾಲಕಿ ತನ್ನ ಮನೆಗೆ ಬಂದು ಕುಟುಂಬದ ಸದಸ್ಯರಿಗೆ ವಿಷಯ ತಿಳಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ದೂರಿನ ಬೆನ್ನಲ್ಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ, ಇದು ಹಸಿ ಸುಳ್ಳು: ಮಮತಾ ಬ್ಯಾನರ್ಜಿ ತಿರುಗೇಟು
ಘಟನೆಯ ಕುರಿತು ಮಾತನಾಡಿದ ಲಕ್ನೋ ಉತ್ತರದ ಉಪ ಪೊಲೀಸ್ ಆಯುಕ್ತ ಅಭಿಜಿತ್ ಆರ್ ಶಂಕರ್, ಬಾಲಕಿಯ ದೂರಿನ ಆಧಾರದ ಮೇಲೆ, ಬಕ್ಷಿ ಕಾ ತಾಲಾಬ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್, ಪೋಕ್ಸೊ, ಎಸ್‌ಸಿ/ಎಸ್ಟಿ ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾಗಿಂತ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚು – ಅಮೆರಿಕದಲ್ಲಿ ರಾಹುಲ್ ಗಾಂಧಿ ಭಾಷಣ