ತುಮಕೂರು: ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಮಹಾಂತೇಶ, ಶ್ರೀನಿವಾಸ್‌ಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಶಿರಾ (Sira) ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2012ರ ಜುಲೈ 9ರಂದು ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು (Students) ಅಪರಾಧಿಗಳು ಕಾರಿನಲ್ಲಿ ಹತ್ತಿಸಿಕೊಂಡಿದ್ದರು. ನಂತರ ಅಪಹರಿಸಿಕೊಂಡು ಹೋಗುವ ಉದ್ದೇಶದಿಂದ ಕಾರು ವೇಗವಾಗಿ ಓಡಿಸುತ್ತಿದ್ದರು. ವಿದ್ಯಾರ್ಥಿನಿಯರು ಜೋರಾಗಿ ಕೂಗಿಕೊಂಡಾಗ ಇಬ್ಬರನ್ನು ಕಾರಿನಿಂದ ಇಳಿಸಿ, ಮತ್ತೊಬ್ಬ ಬಾಲಕಿ ಜೊತೆ ಪರಾರಿಯಾಗಿದ್ದರು. ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ
Advertisement
Advertisement
ಶಿರಾ ಸಮೀಪ ಕಾರು ನಿಲ್ಲಿಸಿ ವಿದ್ಯಾರ್ಥಿನಿ ಮೇಲೆ ಇಬ್ಬರು ಅತ್ಯಾಚಾರವೆಸಗಿದ್ದರು. ಅಲ್ಲದೇ ತಮ್ಮ ಮೊಬೈಲ್‌ನಲ್ಲಿ ಅತ್ಯಾಚಾರವೆಸಗುವ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಎಸ್.ಕೆ.ಪ್ರಹ್ಲಾದ್ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ
Advertisement