ಕೊಪ್ಪಳ: ಇಸ್ರೇಲ್‌ನ ಮಹಿಳೆ, ಹೋಮ್‌ಸ್ಟೇ ಮಾಲೀಕೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ (27) ಬಂಧಿತ ಆರೋಪಿ. ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
Advertisement
ಗಾರೆ ಕೆಲಸ ಮಾಡಿಕೊಂಡಿದ್ದ ಶರಣಬಸವ ಘಟನೆ ನಂತರ ತಲೆಮರೆಸಿಕೊಂಡಿದ್ದ. ಆರೋಪಿ ತಮಿಳುನಾಡಿನ ಚೆನ್ನೈನಲ್ಲಿದ್ದ. ನಿನ್ನೆಯೇ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಇಂದು ಮುಂಜಾನೆ ಆರೋಪಿಯನ್ನು ಗಂಗಾವತಿಗೆ ಕರೆದುಕೊಂಡು ಬಂದಿದ್ದಾರೆ. ಕೃತ್ಯವೆಸಗಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಕೊಪ್ಪಳದ ಕಾಲುವೆಯ ಪ್ರಶಾಂತ ದಡದಲ್ಲಿ ದೇಶಿ ಮತ್ತು ವಿದೇಶಿ ಪ್ರವಾಸಿಗರು ನಕ್ಷತ್ರಗಳನ್ನು ವೀಕ್ಷಿಸುತ್ತಿದ್ದಾಗ ಕೆಲ ದುಷ್ಕರ್ಮಿಗಳು ದಾಂಧಲೆ ಸೃಷ್ಟಿಸಿದ್ದರು. ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರು.
Advertisement
ಆರೋಪಿಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡು ಮೂವರು ಪ್ರಯಾಣಿಕರನ್ನು ಕಾಲುವೆಗೆ ತಳ್ಳಿದರು. ಅಮೆರಿಕ ಮೂಲದ ಡೇನಿಯಲ್ ಮತ್ತು ಮಹಾರಾಷ್ಟ್ರದ ಪ್ರಯಾಣಿಕ ಪಂಕಜ್ ಈಜಿ ದಡ ಸೇರಿದ್ದರು. ಒಡಿಶಾದ ಬಿಬಾಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಅವರ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿತ್ತು.