ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ 11:30 ರ ಸುಮಾರಿಗೆ ಕೆ.ಆರ್ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ತಮಿಳುನಾಡಿನಿಂದ ಬೆಂಗಳೂರಿನ ಅಣ್ಣನ ಮನೆಗೆ ಮಹಿಳೆ ಬಂದಿದ್ದರು.
Advertisement
ಕೆ.ಆರ್ ಮಾರುಕಟ್ಟೆಯಲ್ಲಿ ಯಲಹಂಕ ಬಸ್‌ಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ, ಯಲಹಂಕ ಬಸ್‌ಗಾಗಿ ಆರೋಪಿಗಳನ್ನ ಮಹಿಳೆ ವಿಚಾರಿಸಿದ್ದಾರೆ. ಬಸ್ ತೋರಿಸುತ್ತೇವೆಂದು ಗೋಡೌನ್ ಸ್ಟ್ರೀಟ್ಗೆ ಕರೆದೊಯ್ದು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ.
Advertisement
ಅತ್ಯಾಚಾರ ಬಳಿಕ ಮಹಿಳೆಯ ಮೊಬೈಲ್, ಹಣ, ತಾಳಿ, ಚಿನ್ನ ಕದ್ದು ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆಯು ಬೆಂಗಳೂರು ಕೇಂದ್ರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.