ಜೈಪುರ: ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ನಿರಾಕರಿಸಿದ ವ್ಯಕ್ತಿಯನ್ನು, ಅದೇ ಪ್ರಕರಣದ ಆರೋಪಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
58 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಅವರ ಮನೆಯ ಸಮೀಪವಿರುವ ಬಯಲು ಪ್ರದೇಶವೊಂದರಲ್ಲಿ ಹಗ್ಗದ ಕುಣಿಕೆಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೈಪುರದ ಕಲ್ವಾರ್ ಪ್ರದೇಶದಲ್ಲಿ ಅವರ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಒಂದು ತಿಂಗಳ ನಂತರ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದರಾದರೂ, ಇದೀಗ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನ ಸೇನೆಯ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳು ಸಾವು
ಮಗಳನ್ನು ಜೂನ್ ತಿಂಗಳಲ್ಲಿ ಅಪಹರಿಸಲಾಗಿತ್ತು. ಅಪಹರಣಕಾರ ತನ್ನ ಸ್ನೇಹಿತರ ಸಹಾಯದಿಂದ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಎಂದು ಮೃತ ವ್ಯಕ್ತಿಯ ಪತ್ನಿ ದೂರಿನಲ್ಲಿ ಆರೋಪಿಸಿದ್ದಾರೆ. ಎರಡು ದಿನಗಳ ನಂತರ ಮಗಳು ವಾಪಸಾದಾಗ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ನಾಲ್ವರು ವ್ಯಕ್ತಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಯಿತು. ತನಿಖೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣ ದಾಖಲಾದ ನಂತರ ಆರೋಪಿಯು ನಮಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದ. ಪ್ರಕರಣವನ್ನು ಹಿಂಪಡೆಯದಿದ್ದರೆ ನಿನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ಸಂಚು ರೂಪಿಸಿ, ನನ್ನ ಪತಿಯನ್ನೂ ಹತ್ಯೆ ಮಾಡಿದ್ದಾರೆ. ಘಟನೆಯನ್ನು ಆತ್ಮಹತ್ಯೆಯಂತೆ ಬಿಂಬಿಸಲು ಮೃತದೇಹವನ್ನು ಫ್ಯಾನ್ಗೆ ನೇತುಹಾಕಿದ್ದರು ಎಂದು ದೂರಿದ್ದಾರೆ. ಇದನ್ನೂ ಓದಿ: ವಿದ್ಯುತ್ ಬಿಲ್ ನೀಡಲು ಬಂದ ಹೆಸ್ಕಾಂ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ

