ದಾವಣಗೆರೆ: ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Gold) ದರೋಡೆ ಮಾಡಿದ ಘಟನೆ ಚನ್ನಗಿರಿ (Channagiri) ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಾವಿತ್ರಮ್ಮ (60) ಹಾಗೂ ಮಾದಪ್ಪ (62) ಎಂಬವರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಕೈಕಾಲು ಕಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಕಳ್ಳರು ಪರಾರಿಯಾಗಿದ್ದಾರೆ. ಇದನ್ನೂ ಓದಿ: 17ರ ಹುಡುಗನ ಜೊತೆ 30ರ ಆಂಟಿ ಚಕ್ಕಂದ – ಏಕಾಂತದಲ್ಲಿದ್ದಾಗ ನೋಡಿದ ಬಾಲಕಿ ಕತ್ತು ಹಿಸುಕಿ ಕೊಲೆ
ಸ್ಥಳದಲ್ಲಿ ಸಂತೆಬೆನ್ನೂರು (Santebennuru) ಠಾಣೆಯ ಪೊಲೀಸರು ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆದಿದೆ. ದರೋಡೆ ಗ್ಯಾಂಗ್ ಬಂಧನಕ್ಕೆ ಎಸ್‍ಪಿ ಉಮಾ ಪ್ರಶಾಂತ್ ತಂಡ ರಚಿಸಿದ್ದಾರೆ. ಇದನ್ನೂ ಓದಿ: ಬಾಲಕನ ಕೊಲೆ ಆರೋಪ – ಹಿಗ್ಗಾಮುಗ್ಗಾ ಥಳಿಸಿ ದಂಪತಿಯ ಹತ್ಯೆ