LatestLeading NewsMain PostNational

ಉತ್ತರ ಪ್ರದೇಶದ ಉದ್ದದ ಎಕ್ಸ್‌ಪ್ರೆಸ್‌ವೇಗೆ ಮೋದಿ ಶಂಕುಸ್ಥಾಪನೆ

Advertisements

ಲಕ್ನೋ: ಉತ್ತರಪ್ರದೇಶದ ಶಹಜಹಾನ್‍ಪುರದಲ್ಲಿ ನಿರ್ಮಾಣವಾಗುತ್ತಿರುವ 594 ಕಿ.ಮೀ ಉದ್ದದ ಗಂಗಾ ಎಕ್ಸ್‌ಪ್ರೆಸ್‌ವೇ ಯೋಜನೆಯ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೆರವೇರಿಸಿದರು.

ಶಹಜಹಾನ್‍ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿಯಾಗಿ ಶಂಕುಸ್ಥಾಪನೆ ಮಾಡಿದರು. ಆರು ಪಥಗಳ ಗಂಗಾ ಎಕ್ಸ್‌ಪ್ರೆಸ್‌ವೇ 36,230 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಇದು ಉತ್ತರಪ್ರದೇಶದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಎಂಬ ಖ್ಯಾತಿ ಗಳಿಸಲಿದ್ದು, ಮೀರತ್‍ನಿಂದ ಪ್ರಯಾಗ್‍ರಾಜ್‍ಗೆ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ 12 ಜಿಲ್ಲೆಗಳ ಮೂಲಕ ಹಾದು ಹೋಗಲಿದೆ. ಮೀರತ್‍ನ ಬಿಜೌಲಿ ಗ್ರಾಮದ ಬಳಿ ಪ್ರಾರಂಭವಾಗುವ ಎಕ್ಸ್‌ಪ್ರೆಸ್‌ವೇ ಪ್ರಯಾಗ್‍ರಾಜ್‍ನ ಜುದಾಪುರ್ ದಂಡು ಗ್ರಾಮದವರೆಗೂ ವಿಸ್ತರಿಸುತ್ತದೆ. ಈ ಹೆದ್ದಾರಿಯು ಮೀರತ್, ಹಾಪುರ, ಬುಲಂದ್‍ಶಹರ್, ಅಮ್ರೋಹಾ, ಸಂಭಾಲ್, ಬುದೌನ್, ಶಹಜಹಾನ್‍ಪುರ, ಹರ್‍ದೋಯಿ, ರಾಯ್ ಬರೇಲಿ, ಪ್ರತಾಪಗಢ ಮತ್ತು ಪ್ರಯಾಗರಾಜ್ ಮೂಲಕ ಹಾದು ಹೋಗುತ್ತದೆ. ಇದನ್ನೂ ಓದಿ: ವೇದಿಕೆ ಮೇಲೆಯೇ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಸಂಸದ!

ಶಹಜಹಾನ್‍ಪುರದ ಎಕ್ಸ್‌ಪ್ರೆಸ್‌ವೇನಲ್ಲಿ ಭಾರತದ ವಾಯುಪಡೆಯ ವಿಮಾನಗಳಿಗೆ ತುರ್ತು ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಮಾಡಲು 3.5 ಕಿ.ಮೀ. ಉದ್ದದ ಏರ್ ಸ್ಟ್ರಿಪ್ ಕೂಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ಉದ್ದೇಶಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಕೈಗಾರಿಕಾ ಅಭಿವೃದ್ಧಿ, ವ್ಯಾಪಾರ, ಕೃಷಿ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಗುರಿ ಹೊಂದಲಾಗಿದೆ. ಈ ಕಾಮಗಾರಿ 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: ರುದ್ರಾಕ್ಷಿ ಹಾರ ಧರಿಸಲು ರಾಹುಲ್ ಗಾಂಧಿ ನಕಾರ ಬಿಜೆಪಿ ಟೀಕೆ – ಕಾಂಗ್ರೆಸ್ ತಿರುಗೇಟು

Leave a Reply

Your email address will not be published.

Back to top button