ಕೊಪ್ಪಳ: ಇಲ್ಲಿನ ಗಂಗಾವತಿ ಪಂಚಾಯಿತಿಯಿಂದ ಅನುಷ್ಠಾನಗೊಂಡ ನಾನಾ ಕಾಮಗಾರಿಯಲ್ಲಿ ಅಕ್ರಮ ಎಸಗಿರುವ ಆರೋಪ ಸಾಬೀತಾದ ಹಿನ್ನೆಲೆ ಗಂಗಾವತಿ (Gangavathi) ಪಂಚಾಯಿತಿ ಉಪವಿಭಾಗ ಎಂಜಿನಿಯರಿಂಗ್ ವಿಭಾಗದ ಜೂನಿಯರ್ ಎಂಜಿನೀಯರ್ ಪಲ್ಲವಿ ಅವರನ್ನು ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.
ಲೋಕಾಯುಕ್ತ ಪೊಲೀಸರ ಶಿಫಾರಸ್ಸಿನ ಮೇರೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಪ್ರಧಾನ ಎಂಜಿನಿಯರ್ ಶ್ರೀನಾಥ್ ಕೆ., ಜೆ ಪಲ್ಲವಿಯನ್ನು ಅಮಾನತು ಮಾಡಿ ಆಗಸ್ಟ್ 14ರಂದು ಈ ಆಡಳಿತಾತ್ಮಕ ಕ್ರಮ ಜರುಗಿಸಿದ್ದಾರೆ. (ನರೇಗಾ) ಯೋಜನೆಯಡಿ ಕೋಟ್ಯಂತರ ರೂಪಾಯಿ ಅಕ್ರಮ, ನಕಲಿ ಬಿಲ್ ಸೃಷ್ಟಿಸಿದ ಆರೋಪ ಪಲ್ಲವಿ ಮೇಲಿದೆ. ಇದನ್ನೂ ಓದಿ: ಹನೂರು ಎನ್‌ಕೌಂಟರ್ ಕೇಸ್ – ಮೃತ ಮೂವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ವಿತರಣೆ
ಇಲಾಖೆಯಿಂದ ಅನುಷ್ಠಾನಗೊಂಡ ಸಿ.ಸಿ. ರಸ್ತೆ ಕಾಮಗಾರಿಗಳಲ್ಲಿ ಕಳಪೆ ಮಟ್ಟದ ಕೆಲಸ ಮಾಡಿರುವ ಗಂಭೀರ ಆರೋಪದ ಹಿನ್ನೆಲೆ ತಕ್ಷಣದಿಂದ ಜಾರಿಗೆ ಬರುವಂತೆ ಕಿರಿಯ ಎಂಜಿನಿಯರ್ ಪಲ್ಲವಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

