ಕೊಪ್ಪಳ: ಜಿಲ್ಲೆಯ ಗಂಗಾವತಿ ಜಯನಗರ ನಿವಾಸಿಯಾದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
Advertisement
ರಾಜ್ಯೋತ್ಸವ ಪ್ರಶಸ್ತಿಯ ಸಂಕೀರ್ಣ ವಿಭಾಗದಲ್ಲಿ ಪ್ರಾಣೇಶ್‍ಗೆ ಪ್ರಶಸ್ತಿ ಬಂದಿದೆ. ಸತತ 30 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಪ್ರಾಣೇಶ್ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ನಗಿಸುವವನ ನೋವುಗಳು, ಅನಿಸಿದ್ದು ಅನುಭವಿಸಿದ್ದು, ಪ್ರಾಣೇಶ್ ಪಯಣ, ಪ್ರಾಣೇಶ್ ಪಂಚ್ ಇನ್ನಿತರ ಕೃತಿಗಳು ಜನರ ಮೆಚ್ಚುಗೆಯನ್ನು ಪಡೆದುಕೊಂಡಿವೆ. ಇದನ್ನೂ ಓದಿ: ದೇವರಾಜ್, ಬೋಪಣ್ಣ ಸೇರಿದಂತೆ 66 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ
Advertisement
Advertisement
ಹಾಸ್ಯ ಕಲಾವಿದರಾಗಿ ಪ್ರಾಣೇಶ್ ರಾಜ್ಯ ಸೇರಿದಂತೆ ದೇಶ, ವಿದೇಶಗಳಲ್ಲಿ ಕೂಡ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. 30 ವರ್ಷಗಳ ಸಾಹಿತ್ಯ ಸೇವೆಯನ್ನು ಗುರುತಿಸಿ, ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಸಂತಸದ ವಿಷಯವಾಗಿದೆ. ಈ ಪ್ರಶಸ್ತಿಯನ್ನು ನನ್ನ ಕಾರ್ಯಕ್ರಮಗಳಿಗೆ ಆಗಮಿಸಿ ನಕ್ಕು ಆರ್ಶೀವಾದ ಮಾಡಿದವರಿಗೆ ಅರ್ಪಿಸುತ್ತೇನೆ ಎಂದು ಪ್ರಾಣೇಶ್ ಪಬ್ಲಿಕ್ ಟಿವಿ ಜೊತೆ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾಡಿನಲ್ಲೇ ತನ್ನ ಆಯಸ್ಸು ಕಳೆದ 90ರ ವೃದ್ಧನಿಗೆ ಒಲಿದು ಬಂತು ರಾಜ್ಯೋತ್ಸವ ಪ್ರಶಸ್ತಿ
Advertisement