– ನಾಯಿಯ ವೆಜೈನಲ್ ಸ್ವಾಬ್ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ರವಾನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬೀದಿನಾಯಿ (Stray Dog) ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 25 ಸಿಸಿಟಿವಿಯನ್ನು ಪರಿಶೀಲಿಸಿ ಕೊನೆಗೂ ನಾಯಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಬೆಳ್ಳಂದೂರು (Bellandur) ಬಳಿಯ ಸರ್ಜಾಪುರ (Sarjapura) ರಸ್ತೆಯ ಕೊಡತಿ ಗ್ರಾಮದಲ್ಲಿ ಅಕ್ಟೋಬರ್ 15ರಂದು ಬೀದಿನಾಯಿಗೆ ಆಹಾರ ಹಾಕುವ ಮಹಿಳೆಯೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಬೀದಿ ನಾಯಿಯ ಮೇಲೆ ನಾಲ್ವರು ಯುವಕರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಅಂತಾ ಪೊಲೀಸರಿಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು, ಸುಮಾರು 25 ಸಿಸಿಟಿವಿಯನ್ನು ಪರಿಶೀಲನೆ ನಡೆಸಿ ಕೊನೆಗೂ ಆ ನಾಯಿಯನ್ನು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಪುತ್ತೂರಿನಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ; 4 ವರ್ಷದ ಮಗು ಸಾವು
ನಾಯಿಯ ವೆಜೈನಲ್ ಸ್ವಾಬ್ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಮೊದಲಿಗೆ ಅತ್ಯಾಚಾರ ಆಗಿದೆಯಾ ಇಲ್ವಾ ಅನ್ನೋದರ ಬಗ್ಗೆ ತನಿಖೆ ನಡೆಸಿ ರಿಪೋರ್ಟ್ ಬಂದ ಬಳಿಕ ಆರೋಪಿಗಳ ಪತ್ತೆಗೆ ಮುಂದಾಗಲಿದ್ದಾರೆ. ರಸ್ತೆ ಬದಿ ಮಲಗಿದ್ದ ಬೀದಿ ನಾಯಿಯನ್ನು ಎತ್ತೊಯ್ದು ಅತ್ಯಾಚಾರ ಆರೋಪ ಕೇಳಿಬಂದಿತ್ತು. ಮಹಿಳೆಯೊಬ್ಬರು ವರ್ತೂರು ಠಾಣೆಗೆ ದೂರು ನೀಡಿದ್ದರು. ವ್ಯಾಪ್ತಿ ಪರಿಶೀಲನೆ ನಡೆಸಿ ಬೆಳ್ಳಂದೂರು ಪೊಲೀಸರಿಗೆ ಪ್ರಕರಣ ವರ್ಗಾವಣೆ ಬೆಳ್ಳಂದೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಲಂಡನ್‌ಗೆ ತೆರಳುತ್ತಿದ್ದ ರೈಲಿನಲ್ಲಿ 10 ಜನರಿಗೆ ಚಾಕು ಇರಿತ – ಇಬ್ಬರು ಆರೋಪಿಗಳ ಬಂಧನ

