ಅಗರ್ತಲಾ: ತ್ರಿಪುರಾದ (Tripura) ಉನಕೋಟಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವ ಮಹಿಳೆ (Women) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಘಟನೆಯಲ್ಲಿ ಸಿಪಿಐ(ಎಂ) (CPI) ಸಚಿವರ ಪುತ್ರನ ಕೈವಾಡವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ (Congress) ಆರೋಪಿಸಿದೆ. ಆದರೆ ಬಿಜೆಪಿ (BJP) ಆರೋಪವನ್ನು ತಳ್ಳಿಹಾಕಿದೆ. ಇದನ್ನೂ ಓದಿ: 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!
Advertisement
Advertisement
ಇದೇ ತಿಂಗಳ ಅಕ್ಟೋಬರ್ 19ರಂದು ಕುಮಾರಘಾಟ್‌ನ 3 ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ನೆರೆಯ ಮಹಿಳೆಯೊಬ್ಬಳೇ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗುವಂತೆ ಮಾಡಿದ್ದಾಳೆ. ಈ ಸಂಬಂಧ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿ, ಮೂವರನ್ನು ಬಂಧಿಸಲಾಗಿದೆ. ಇನ್ನೂ ಹಲವರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು (Tripura Police) ತಿಳಿಸಿದ್ದಾರೆ.
Advertisement
Advertisement
ಪ್ರಕರಣದಲ್ಲಿ (FIR) ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿದೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಬಂಧಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುತ್ತದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆಶಿಶ್ ಸಹಾ ತಿಳಿಸಿದ್ದಾರೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ
ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಮಾತನಾಡಿ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿರುವುದು ಬೇಸರ ತಂದಿದೆ. ನಾವು ಅವರ ವಿರುದ್ಧ ತನಿಖೆಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಕೈಗೊಳ್ಳಲಿ ಎಂದು ಹೇಳಿದ್ದಾರೆ.
ಆರೋಪ ತಳ್ಳಿಹಾಕಿರುವ ಬಿಜೆಪಿ, ಅಕ್ಟೋಬರ್ 19ರಂದು ಸಚಿವರ ಪುತ್ರ ಅಗರ್ತಲಾದಲ್ಲಿದ್ದ ಕಾರಣ ಆರೋಪಗಳು ಸಂಪೂರ್ಣವಾಗಿ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದೆ.