Thursday, 25th April 2019

Recent News

ಮೈಸೂರಲ್ಲಿ ಯುವತಿ ಮೇಲೆ ಗ್ಯಾಂಗ್‍ರೇಪ್ – ಗುಪ್ತಾಂಗವನ್ನು ಬ್ಲೇಡ್ ನಲ್ಲಿ ಕೊಯ್ದು ವಿಕೃತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಯುವತಿಯ ಮೇಲೆ ಫೆಬ್ರವರಿ 3 ರಂದು ಗ್ಯಾಂಗ್ ರೇಪ್ ನಡೆದಿದೆ. ಫೆ.8 ರಂದು ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಚಿರಾಗ್ ಅತ್ಯಾಚಾರಕ್ಕೊಳಗಾದ ಯುವತಿಯ ಸ್ನೇಹಿತನಾಗಿದ್ದು, ಡ್ರಾಪ್ ಕೊಡುವ ನೆಪದಲ್ಲಿ ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆತನನೊಂದಿಗೆ ಮೂವರು ಯುವಕರು ಸೇರಿಕೊಂಡು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನಲ್ಲಿ ಏನಿದೆ?
ದಿನಾಂಕ ಫೆಬ್ರವರಿ 3 ರಂದು ರಾತ್ರಿ ಸುಮಾರು 7 ಗಂಟೆಗೆ ಮನೆಯಿಂದ ಡಿನ್ನರ್ ಗೆಂದು ಆಟೋದಲ್ಲಿ ಲಲಿತ್ ಮಹಲ್ ಪ್ಯಾಲೇಸ್ ರಸ್ತೆಯಲ್ಲಿರುವ ಚಾಟ್ ಸೆಂಟರ್ ಗೆ ಹೋಗಿದ್ದೆ. ಅಲ್ಲಿ ನನ್ನ ಸ್ನೇಹಿತೆ ಜೊತೆ ಚಾಟ್ಸ್ ತಿಂದು ಬಳಿಕ ಮನೆಗೆ ಹಿಂದಿರುಗಲು ನನ್ನ ಸ್ನೇಹಿತನಾದ ಚಿರಾಗ್‍ ಗೆ ಕರೆ ಮಾಡಿ ಬರುವಂತೆ ಹೇಳಿದ್ದೆ. ಆತ ಕಾರಿನಲ್ಲಿ ಬಂದು ನನ್ನನ್ನು ಕರೆದುಕೊಂಡು ಕೊಳ್ಳೇಗಾಲದ ಕಡೆಗೆ ಹೋಗುವ ರಸ್ತೆಯಲ್ಲಿ ಹೋಗುತ್ತಿದ್ದನು. ದಾರಿಯಲ್ಲಿ ಮೂವರು ಅಪರಿಚಿತರು ಕಾರಿನಲ್ಲಿ ಕುಳಿತುಕೊಂಡರು. ಅವರೆಲ್ಲರೂ ಕುಡಿದಿದ್ದು, ನಾನು ಮೈಸೂರಿಗೆ ಇತ್ತೀಚೆಗೆ ಬಂದಿದ್ದರಿಂದ ನನಗೆ ಮಾರ್ಗ ತಿಳಿದಿರಲಿಲ್ಲ.

ಸುಮಾರು 30 ನಿಮಿಷದ ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ನಾಲ್ವರು ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದರು. ಬಳಿಕ ಬ್ಲೇಡ್ ತೆಗೆದುಕೊಂಡು ಗುಪ್ತಾಂಗವನ್ನು ಕೊಯ್ದು ಹಿಂಸೆ ಕೊಟ್ಟಿದ್ದಾರೆ. ನಂತರ ಅವರಿಂದ ಹೇಗೋ ತಪ್ಪಿಸಿಕೊಂಡು ಆಟೋದಲ್ಲಿ ಮನೆಗೆ ಬಂದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ನೇಹಿತೆಯ ಸಹಾಯದಿಂದ ದೂರು ನೀಡುತ್ತಿದ್ದೇನೆ. ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಮನವಿ ಮಾಡುತ್ತಿದ್ದೇನೆ.

ಈ ಕುರಿತು ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಯುವಕ ಚಿರಾಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *