ರಾಂಚಿ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಮೇಲೆ ಪೇದೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಾಂಗೋ ಪೊಲೀಸ್ ಠಾಣೆಯಲ್ಲಿ ಪೇದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 17 ವರ್ಷದ ಸಂತ್ರಸ್ತೆ ಮಂಗಳವಾರದಂದು ಆರೋಪ ಮಾಡಿದ್ದಾರೆ. ಗಸ್ತಿನಲ್ಲಿದ್ದ ಪೊಲೀಸ್ ತಂಡ ಸಂತ್ರಸ್ತೆಯನ್ನು ಪೊಲೀಸ್ ಠಾಣೆಗೆ ಕರೆತಂದ ನಂತರ ಪೇದೆ ಈ ಹೀನ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ಪೇದೆ ಯಾರು ಎಂದು ಇನ್ನೂ ಗುರುತಿಸಿಲ್ಲ ಎಂದು ವರದಿಯಾಗಿದೆ.
Advertisement
Advertisement
2017ರ ಫೆಬ್ರವರಿಯಲ್ಲಿ ಸಂತ್ರಸ್ತೆ ಮೇಲೆ ಕಾಮುಕರು ಸತತವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಆದ್ರೆ ಆಕೆ ಈ ಬಗ್ಗೆ ಒಂದು ವರ್ಷದ ನಂತರ 2018ರ ಜನವರಿ ಯಲ್ಲಿ ದೂರು ಸಲ್ಲಿಸಲು ಮುಂದಾಗಿದ್ದರು. ಆದ್ರೆ ಮಾಂಗೋ ಪೊಲೀಸ್ ಠಾಣೆಗೆ ಬಂದಾಗ ಪೊಲೀಸ್ ಠಾಣೆಯಲ್ಲಿಯೇ ಪೇದೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ.
Advertisement
ಪ್ರಕರಣದಲ್ಲಿ ಪೇದೆಯ ಪಾತ್ರವಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಕೆ.ಎನ್. ಮಿಶ್ರಾ ಹೇಳಿದ್ದಾರೆ.
Advertisement