ಬಸ್ಸಿನೊಳಗೆ ನುಗ್ಗಿ, ಪೊಲೀಸರ ಮೇಲೆ ಖಾರದ ಪುಡಿ ಎರಚಿ ಆರೋಪಿಗೆ ಗುಂಡಿಟ್ಟು ಹತ್ಯೆ!

Public TV
2 Min Read
SHOT OUT

ಜೈಪುರ್: ಬಿಜೆಪಿ (BJP) ನಾಯಕನನನ್ನು ಹತ್ಯೆಗೈದ ಆರೋಪಿ ಕುಲದೀಪ್ ಜಘೀನಾನನ್ನು ಬಸ್ಸಿನೊಳಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬುಧವಾರ ನ್ಯಾಯಾಲಯದ ವಿಚಾರಣೆಗಾಗಿ ಬಸ್‍ನಲ್ಲಿ ಆರೋಪಿಯನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ರಾಜಸ್ಥಾನದ (Rajasthan) ಭರತ್‍ಪುರದ ಅಮೋಲಿ ಟೋಲ್ ಪ್ಲಾಜಾ ಬಳಿ ಕಾರು ಮತ್ತು ಎರಡು ಬೈಕ್‍ಗಳಲ್ಲಿ ಬಂದ 12 ಜನರ ಗುಂಪು ಕೊಲೆ ಆರೋಪಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ವೇಳೆ ಜೊತೆಗಿದ್ದ ಇನ್ನೋರ್ವ ಆರೋಪಿಗೂ ಗುಂಡು ತಗುಲಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡದಿದ್ರೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ: ಈಶ್ವರಪ್ಪ

ಗುಂಡಿನ ದಾಳಿ ನಡೆಸಿದ ಗುಂಪು ಬಸ್‍ನ್ನು ತಡೆದಿದೆ. ಬಳಿಕ ಏಕಾಏಕಿ ಬಸ್‍ನೊಳಗೆ ನುಗ್ಗಿ ಪೊಲೀಸರ (Police) ಮೇಲೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಕುಲದೀಪ್ ಜಘೀನಾ ಮತ್ತು ವಿಜಯಪಾಲ್ ಮೇಲೆ ಗುಂಡು ಹಾರಿಸಿದ್ದಾರೆ. ಬಸ್‍ನಲ್ಲಿ ಪ್ರಯಾಣಿಕರ ಭದ್ರತೆ ದೃಷ್ಟಿಯಿಂದ ಪೊಲೀಸ್ ತಂಡ ಗುಂಡು ಹಾರಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಕೊಲೆ ಆರೋಪಿಗಳನ್ನು ಭರತ್‍ಪುರದ ಆರ್‍ಬಿಎಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಜಘೀನಾ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಆದರೆ ವಿಜಯಪಾಲ್ ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ದೌಸಾ ಸೇರಿದಂತೆ ಸಮೀಪದ ಜಿಲ್ಲೆಗಳಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದ್ದು, ಹೆದ್ದಾರಿಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಯಾವುದೇ ಪೊಲೀಸರು ನಿರ್ಲಕ್ಷ್ಯ ತೋರಿದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಭರತ್‍ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೃಪಾಲ್ ಜಘೀನಾ ಕೊಲೆಯಲ್ಲಿ ಕುಲದೀಪ್ ಜಘೀನಾ ಮತ್ತು ವಿಜಯಪಾಲ್ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಆಂಧ್ರ, ಕರ್ನಾಟಕ, ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಗೆ ಕೇಂದ್ರ ಸೂಚನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article