ಮಂಗಳೂರು: ಮಸೀದಿ ವಿಚಾರದಲ್ಲಿ ಎರಡು ತಂಡಗಳ ನಡುವಿನ ಮನಸ್ತಾಪ ತಾರಕಕ್ಕೇರಿ ಗ್ಯಾಂಗ್ ವಾರ್ ನಡೆದ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.
8 ಮಂದಿಯ ತಂಡ ಲಾಂಗು ಮಚ್ಚುಗಳನ್ನು ಹಿಡಿದು 3 ಜನರ ಮೇಲೆ ದಾಳಿ ನಡೆಸಿ ಮನಸೋ ಇಚ್ಛೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಎದುರಾಳಿ ತಂಡದ ಮೂವರಿಗೂ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ತಸ್ಲೀಂ, ಹ್ಯಾರಿಸ್, ಶಿಹಾಬ್ ಎಂದು ಗುರುತಿಸಲಾಗಿದೆ ಹಾಗೂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಗೇರುಕಟ್ಟೆ ಬಸ್ ಸ್ಟಾಂಡ್ ಬಳಿ ಸಾರ್ವಜನಿಕರ ಎದುರೇ ಗ್ಯಾಂಗ್ ವಾರ್ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳಾದ ಯಾಕೂಬ್, ಉಮರಬ್ಬ, ರವೂಫ್, ಇರ್ಫಾನ್, ರಿಝ್ವಾನ್, ಅಬೂಬಕರ್, ಆದಂ ಶಾಫಿ, ಹೈದರ್ ಮನಬಂದಂತೆ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.
Advertisement
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.