ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ರಶ್ಮಿಕಾ ವಿರುದ್ಧ ಕೆಂಡ ಕಾರಿದ ಗಣಿಗ ರವಿ

Public TV
1 Min Read
Ganiga Ravi 1 1

– ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ರೆ, ಟೈಂ ಇಲ್ಲ ಬರಲ್ಲ ಅಂತಾರೆ ಎಂದು ಕಿಡಿ

ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ವಿ, ಆದರೆ ನನಗೆ ಟೈಂ ಇಲ್ಲ, ಬರಲ್ಲ ಅಂತಾರೆ ಎಂದು ಶಾಸಕ ಗಣಿಗ ರವಿಕುಮಾರ (Ganiga Ravi) ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ (Rashmika Mandanna) ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.ಇದನ್ನೂ ಓದಿ: ಕಳೆದ 19 ತಿಂಗಳಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಸಮಸ್ಯೆ ಉದ್ಭವಿಸಿಲ್ಲ – ರಾಜ್ಯಪಾಲರ ಭಾಷಣದ ಮೂಲಕ ವಿಪಕ್ಷಗಳಿಗೆ ತಿರುಗೇಟು

ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್. ಚಲನಚಿತ್ರ ಮಂಡಳಿಯವರು ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂಬ ಮೊಯ್ಲಿ ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಇನ್ನೂ ಪೇಪರ್ ಓದಿಲ್ಲ, ಓದ್ಕೊಂಡು ಬಂದು ನಂತರ ಮಾತಾಡುವೆ ಎಂದು ಹೇಳಿದರು.ಇದನ್ನೂ ಓದಿ: ಭಾರತದ ಕನಸು ಭಗ್ನ: ಪ್ರಿಯಾಂಕಾ ಚೋಪ್ರಾ ‘ಅನುಜಾ’ ಚಿತ್ರಕ್ಕೆ ಸಿಗಲಿಲ್ಲ ಆಸ್ಕರ್ ಪ್ರಶಸ್ತಿ

Share This Article