ರಶ್ಮಿಕಾ ಮಂದಣ್ಣಗೆ (Rashmika Mandanna) ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ಕಿಡಿಕಾರಿದ್ದರ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಆವತ್ತು ಆಡಿದ ಮಾತಿಗೆ ಈಗಲೂ ಬದ್ಧನಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ದಕ್ಷಿಣದತ್ತ ‘ಸಪ್ತಸಾಗರದ’ ಚೆಲುವೆ- ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ರುಕ್ಮಿಣಿ ಬ್ಯುಸಿ
ಚಿತ್ಸೋತ್ಸವಕ್ಕೆ ಕರೆದರೆ ರಶ್ಮಿಕಾ ಟೈಮ್ ಇಲ್ಲ ಅಂತಾರೆ ಎಂದು ನಟಿಯ ವಿರುದ್ಧ ರವಿ ಗಣಿಗ ಕೆಂಡಕಾರಿದ್ದರು. ಈ ಬೆನ್ನಲ್ಲೇ ನಟಿಗೆ ಭದ್ರತೆ ಬೇಕು ಅಂತ ಕೊಡವ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ರವಿ ಗಣಿಗ ಮತ್ತೆ ಕಿಡಿಕಾರಿದ್ದಾರೆ. ಪ್ರಚಾರಕೋಸ್ಕರ ನಾಚಪ್ಪ ಪತ್ರ ಬರೆದಿರಬಹುದು. ಅದಕ್ಕೆ ಜಾಸ್ತಿ ಮನ್ನಣೆ ಕೊಡೋ ಅವಶ್ಯಕತೆಯಿಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ರವಿ ಗಣಿಗ ಹೇಳಿಕೆ ನೀಡಿದ್ದಾರೆ.
ಯಾರಾದರೂ ಜವಾಬ್ದಾರಿಯುತ ವ್ಯಕ್ತಿ ಮಾತನಾಡಿದರೆ ಮನ್ನಣೆ ಕೊಡಬಹುದಿತ್ತು. ಕೊಡಗಿನಲ್ಲಿ ನಾಚಪ್ಪ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಜಾಸ್ತಿ ಪ್ರಾಮುಖ್ಯತೆ ಕೊಡೋದು ತಪ್ಪು. ಆವತ್ತು ಆಡಿದ ಮಾತಿಗೆ ಈಗಲೂ ಬದ್ಧನಿದ್ದೇನೆ. ನಮ್ಮ ಜಲ, ನಮ್ಮ ಭಾಷೆ, ನಮ್ಮ ರಾಜ್ಯವೇ ಮುಖ್ಯ. ನಮ್ಮ ವೈಯಕ್ತಿಕ ಹಿತಾಸ್ತಕಿ ಅಲ್ಲ. ಕಳೆದ ಬಾರಿ ಚಲನಚಿತ್ರೋತ್ಸವಕ್ಕೆ ಕರೆದಾಗ ಅವರು ನಿರಾಕರಿಸಿದ್ದು, ಹಲವಾರು ವೇದಿಕೆಯಲ್ಲಿ ಕನ್ನಡ ಮತ್ತು ಕರ್ನಾಟಕವನ್ನು ಅವಮಾನಕಾರಿಯಾಗಿ ರಶ್ಮಿಕಾ ಮಾತನಾಡಿರೋದು ಇಂದಿಗೂ ಖಂಡಿಸುತ್ತೇನೆ. ಇವತ್ತಿಗೂ ಕರ್ನಾಟಕದ ಪರ ನಾನಿದ್ದೇನೆ ಅಂತ ಹೇಳಲಿ, ಆ ಬಗ್ಗೆ ನಾನು ತುಟಿಕ್ ಪುಟಿಕ್ ಎನ್ನಲ್ಲ ಎಂದು ರವಿ ಗಣಿಗ ಹೇಳಿದ್ದಾರೆ.
ಇತ್ತೀಚೆಗೆ ವಿಧಾನಸೌಧದಲ್ಲಿ ರವಿ ಗಣಿಗ ಮಾತನಾಡಿ, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.