ಮಂಡ್ಯ: ಏಕನಾಥ ಶಿಂಧೆ (Eknath Shinde) ರೀತಿ ತಾಯಿಗೆ ದ್ರೋಹ ಮಾಡಿದ್ದಾರೆ. ಅನ್ನ ಕೊಟ್ಟ ಪಕ್ಷಕ್ಕೆ ಚೂರಿ ಹಾಕೋರು ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ಎಂದು ಮಂಡ್ಯ ಕಾಂಗ್ರೆಸ್ (Congress) ಶಾಸಕ ಗಣಿಗ ರವಿಕುಮಾರ್ (Ganiga Ravikumar) ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಮಂಡ್ಯದಲ್ಲಿ (Mandya) ಮಾತನಾಡಿದ ರವಿಕುಮಾರ್, ಅವರ ರೀತಿ ನಮ್ಮಲ್ಲಿ ಯಾರೂ ಶಕುನಿ ಕೆಲಸ ಮಾಡಲ್ಲ. ನಮ್ಮದು 136+2 ಗಟ್ಟಿಯಾದ ಸರ್ಕಾರ. ಏಕನಾಥ ಶಿಂಧೆ ಅನ್ನ ಹಾಕಿದರಿಗೆ ವಿಷ ಹಾಕಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಐದು ವರ್ಷ ಸ್ಟ್ರಾಂಗ್ ಆಗಿ ನಡೆಯುತ್ತದೆ ಎಂದರು. ಇದನ್ನೂ ಓದಿ: ನಾನು ಶೀಘ್ರದಲ್ಲಿಯೇ ಮದುವೆ ಆಗಬೇಕಾಗಿದೆ: ರಾಹುಲ್ ಗಾಂಧಿ
Advertisement
Advertisement
ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆ ಹಾಗೂ ಜೆಡಿಎಸ್‌ನ 13 ಶಾಸಕರು ಸಹ ಇದ್ದಾರೆ. ಮೊದಲು ಅವರ ಪಕ್ಷವನ್ನು ಉಳಿಸಿಕೊಳ್ಳಲಿ. ಬಿಜೆಪಿ-ಜೆಡಿಎಸ್ ನಾಯಕರು ಅವರ ಶಾಸಕರನ್ನು ಭದ್ರವಾಗಿ ಇಟ್ಟುಕೊಳ್ಳಲಿ. ಎಂಪಿ ಚುನಾವಣೆ ಮುಂಚೆಯೇ ಅವರು ನಮ್ಮೊಂದಿಗೆ ಸಂಪರ್ಕದಲ್ಲಿ ಇದ್ದಾರೆ. ಎಲ್ಲರೂ ಸಂಪರ್ಕದಲ್ಲಿ ಇದ್ದಾರೆ, ಮಾತುಕತೆ ನಡೆಯುತ್ತಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಮಾತುಕತೆಗೆ ಹೇಳುತ್ತಿದ್ದಾರೆ ಎನ್ನುವ ಮೂಲಕ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಫಲಿತಾಂಶ ಬಂದ ನಂತರ ಶಿಂಧೆ ಮಾಜಿ ಆಗುತ್ತಾರೆ: ಎಂಬಿ ಪಾಟೀಲ್
Advertisement
Advertisement
ಜಿಟಿ ದೇವೇಗೌಡ ಜೆಡಿಎಸ್ ಕಟ್ಟಪ್ಪ ಆಗಿದ್ದಾರೆ. ಅವರ ಹೆಸರು ಬೇಡ, ಬೇರೆ ಅವರು ನಮ್ಮೊಟ್ಟಿಗೆ ಇದ್ದಾರೆ. ಕೆಲವೇ ದಿನಗಳಲ್ಲಿ ಬಿಜೆಪಿ ವಿರೋಧ ಪಕ್ಷ ಸ್ಥಾನ ಕಳೆದುಕೊಳ್ಳುತ್ತದೆ. ವಿರೋಧ ಪಕ್ಷಕ್ಕೆ ಬೇಕಾದ ನಂಬರ್ ಅವರ ಬಳಿ ಇರಲ್ಲ. ಮುಂದಿನ ನಾಲ್ಕು ವರ್ಷ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತೆ. ಬಿಜೆಪಿ ಯಾವಾಗಲೂ ಸ್ವತಂತ್ರವಾಗಿ ಗೆದ್ದು ಬಂದಿಲ್ಲ. ಬೇರೆ ಅವರನ್ನು ಒಡೆದು ಅಧಿಕಾರಕ್ಕೆ ಬಂದಿದ್ದಾರೆ. ಈಗ ಅದು ನಡೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತೆ: ಶಿಂಧೆಗೆ ಡಿಕೆಶಿ ಟಾಂಗ್