ಬೀದರ್: ತೆಲಂಗಾಣದಿಂದ (Telangana) ಮಹಾರಾಷ್ಟ್ರಕ್ಕೆ (Maharashtra) ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿದ್ದ 150 ಕೆಜಿ ಗಾಂಜಾ (Ganja) ಜಪ್ತಿ ಮಾಡಿ ಮೂವರು ಗಾಂಜಾಕೋರರನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್ (Bidar) ಜಿಲ್ಲೆಯ ಔರಾದ್ ತಾಲೂಕಿನ ಎಕಂಬಾ ಚೆಕ್ ಪೋಸ್ಟ್‌ನಲ್ಲಿ 1 ಕೋಟಿ 50 ಲಕ್ಷ ರೂ. ಬೆಲೆ ಬಾಳುವ 130 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬೊಲೆರೋ (Bolero) ಕಾರಿನ ಸೀಕ್ರೆಟ್ ಲಾಕರ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದ ಬೀದರ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಭೇಟೆ – ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
Advertisement
Advertisement
ಅಷ್ಟೇ ಅಲ್ಲದೇ ತೆಲಂಗಾಣದಿಂದ ಬಸ್‌ನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಬೀದರ್ ಜಿಲ್ಲೆಯ ಹುಮ್ನಾಬಾದ್ (Humnabad) ಪಟ್ಟಣದಲ್ಲಿ ಪೊಲೀಸರು 20 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಬೀದರ್‌ಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ (Arrest) ಹುಮ್ನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: 100 ವರ್ಷದ ಹಳೆಯ ಮರ ಶೆಡ್ ಮೇಲೆ ಬಿದ್ದು 7 ಮಂದಿ ದಾರುಣ ಸಾವು
Advertisement
ಕಳೆದ ಮೂರು ದಿನಗಳಲ್ಲಿ ಒಟ್ಟು 2 ಕೋಟಿ 55 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್