Wednesday, 22nd May 2019

Recent News

ಪೊಲೀಸರ ಮೇಲೆಯೇ ವಾಹನ ಹರಿಸಲು ಮುಂದಾದ ಗಾಂಜಾ ಆರೋಪಿಗಳು!

ಬೀದರ್: ಅಕ್ರಮ ಗಾಂಜಾ ಸಾಗಾಟದ ಹಿನ್ನೆಲೆಯಲ್ಲಿ ವಾಹನ ತಪಾಸಣೆ ನಡೆಸಲು ಮುಂದಾದಗ ಪೊಲೀಸರ ಮೇಲೆಯೇ ಆರೋಪಿಗಳು ವಾಹನವನ್ನು ಹತ್ತಿಸಲು ಯತ್ನ ಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಜಂಬಗಿಯಿಂದ ಬೀದರ್ ಮಾರ್ಗವಾಗಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ, ಬೀದರ್ ಗ್ರಾಮಾಂತರ ಪೊಲೀಸರು ಬೆನಕನಹಳ್ಳಿ ರಸ್ತೆಯಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೆಂಗಳೂರು ನೊಂದಣಿ ಹೊಂದಿದ್ದ ಕಾರಿನ ಮೂಲಕ ಇಬ್ಬರು ಗಾಂಜಾ ಆರೋಪಿಗಳು ಅದೇ ಮಾರ್ಗವಾಗಿ ಬಂದಿದ್ದಾರೆ. ಪೊಲೀಸರು ತಪಾಸಣೆ ನಡೆಸಲು ಮುಂದಾಗುತ್ತಿದ್ದಂತೆ, ಆರೋಪಿಗಳು ಪೊಲೀಸರ ಮೇಲೆಯೇ ಕಾರನ್ನು ನುಗ್ಗಿಸಲು ಯತ್ನಿಸಿ ಪರಾರಿಯಾಗಿದ್ದಾರೆ.

ಕೂಡಲೇ ಎಚ್ಚೆತ್ತ ಪೊಲೀಸರ ಸಿನಿಮೀಯ ರೀತಿಯಲ್ಲಿ ಆರೋಪಿಗಳಿದ್ದ ಕಾರನ್ನು ಚೇಸ್ ಮಾಡಿದ್ದಾರೆ. ಆದರೆ ಪೊಲೀಸರು ಹಿಂದಿನ ಚೇಸ್ ಮಾಡುತ್ತಿದ್ದಾರೆ ಎನ್ನುವ ವಿಚಾರ ತಿಳಿದ ಆರೋಪಿಗಳು, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಾರು ಇರುವ ಸ್ಥಳಕ್ಕೆ ಬಂದ ಪೊಲೀಸರು, ಕಾರಿನಲ್ಲಿದ್ದ ಸುಮಾರು 25 ಕೆಜಿ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ವರಿಷ್ಠಾಧಿಕಾರಿ ಶ್ರೀಧರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸಿದ್ದಾರೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply

Your email address will not be published. Required fields are marked *