ಬೀದರ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ – 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಸೀಜ್‌

Public TV
1 Min Read
ganja worth rs 2 crore seized in bidar

ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ (Bidar) ಪೊಲೀಸರು (Police) ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಜಮೀನಿನಲ್ಲಿ 6 ಅಡಿಯ 700ಕ್ಕೂ ಅಧಿಕ ಗಿಡಗಳನ್ನು ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಬಸಂತ್ ಎಂಬಾತ ಗಾಂಜಾ ಬೆಳೆದಿದ್ದ ಎಂದು ತಿಳಿದು ಬಂದಿದೆ. ಆತ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಭೋಪಾಲ್‌ನಲ್ಲಿ 1,814 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್‌ – ಇಬ್ಬರು ಅರೆಸ್ಟ್‌

ಗಾಂಜಾ ಗಿಡಗಳನ್ನು ಎಸ್ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಾಶ ಮಾಡಲಾಗಿದೆ. ಈ ಸಂಬಂಧ ಮಂಠಾಳ ಪೊಲೀಸ್‌ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ದೇಶದೆಲ್ಲೆಡೆ ಮಾದಕ ವಸ್ತುಗಳ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಇತ್ತೀಚೆಗೆ ದೆಹಲಿಯಲ್ಲಿ 5,000 ಕೋಟಿ ರೂ. ಮೌಲ್ಯದ ಕೊಕೇನ್‌ ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದರು. ಇನ್ನೂ ಮಧ್ಯಪ್ರದೇಶದಲ್ಲಿ 1,814 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದರು. ಇದನ್ನೂ ಓದಿ: HSR ಲೇಔಟ್ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್‌ – 555 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Share This Article