ಮಂಡ್ಯ: ಗಣೇಶ ವಿಸರ್ಜನೆ ವೇಳೆ (Ganpati Idol Procession) ಕೋಮುಗಲಭೆ (Communal Violence) ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ (Nagamangala town) 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರೋದ್ರಿಂದ ಇಂಥ ಉದ್ಧಟತನ ಆಗ್ತಿದೆ: ಮಂಡ್ಯ ಗಣೇಶ ವಿಸರ್ಜನೆ ಗಲಾಟೆಗೆ ಹೆಚ್ಡಿಕೆ ಬೇಸರ
Advertisement
Advertisement
ನಾಗಮಂಗಲ ಬಂದ್: ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.