ನವದೆಹಲಿ: ಕೋವಿಡ್-19 ಎರಡನೇ ಲಸಿಕೆ ಹಾಗೂ ಬೂಸ್ಟರ್ ಡೋಸ್ ನಡುವಿನ ಅಂತರವನ್ನು 9 ರಿಂದ 6 ತಿಂಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ.
Advertisement
ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹ ಸ್ಥಾಯಿ ತಾಂತ್ರಿಕ ಉಪ ಸಮಿತಿ (ಎನ್ಟಿಜಿಐ) ಕೋವಿಡ್-19 ಎರಡನೇ ಲಸಿಕೆ ಮತ್ತು ಬೂಸ್ಟರ್ ಡೋಸ್ಗಳ ನಡುವಿನ ಅಂತರವನ್ನು ಆರು ತಿಂಗಳಿಗೆ ಇಳಿಸುವಂತೆ ಕಳೆದ ತಿಂಗಳು ಶಿಫಾರಸ್ಸು ಮಾಡಿತ್ತು. ಬಳಿಕ ಇದೀಗ ಎನ್ಟಿಜಿಐ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ಬದುಕಲು ಬಯಸುವುದಿಲ್ಲ: ಮೆಹುವಾ
Advertisement
Advertisement
ಈ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರದ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಬೂಸ್ಟರ್ ಡೋಸ್ ಲಸಿಕೆ ಪಡೆಯುವ ಅವದಿಯನ್ನು 9 ರಿಂದ 6 ತಿಂಗಳಿಗೆ ಇಳಿಕೆ ಮಾಡಲಾಗಿದೆ. ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಬಹುದು ಮತ್ತು ಈ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ಮಾಡಬಹುದು. 18-59 ವರ್ಷ ವಯಸ್ಸಿನ ಎಲ್ಲಾ ಫಲಾನುಭವಿಗಳು ಎರಡನೇ ಡೋಸ್ ಪಡೆದ ಬಳಿಕ ಬೂಸ್ಟರ್ ಡೋಸ್ ಆರು ತಿಂಗಳು ಅಥವಾ 26 ವಾರ ಕಳೆದ ನಂತರ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಪಡೆಯಲು ಅರ್ಹರು ಎಂದರು. ಇದನ್ನೂ ಓದಿ: ದೇವರು ಒಂದು ಅವಕಾಶ ಕೊಟ್ಟಿದ್ದಾನೆ- ರಾಜ್ಯಸಭೆ ನಾಮನಿರ್ದೇಶನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆ ಸಂತಸ
Advertisement
ಇದೀಗ 18-59 ವರ್ಷದೊಳಗಿನವರು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದಾಗಿದೆ. ಖಾಸಗಿ ಲಸಿಕಾ ಕೇಂದ್ರಗಳಲ್ಲಿ ನಿಗದಿತ ಹಣವನ್ನು ಪಾವತಿಸಿ ಲಸಿಕೆ ಪಡೆಯುತ್ತಿದ್ದಾರೆ.