ಕೋಲಾರ: ಕಾರು ಗ್ಯಾರೇಜ್‌ನಲ್ಲಿ (Car Garage) ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ಕಾಣಿಸಿಕೊಂಡು 3 ಕಾರುಗಳು (Car) ಭಸ್ಮವಾಗಿದ್ದು, 2 ಕಾರುಗಳು ಸುಟ್ಟು ಹೋಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ಎಸ್.ಜಿ ಕೋಟೆ ಸಮೀಪದ ಈರಣ್ಣ ಎಂಬುವವರಿಗೆ ಸೇರಿದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್ ನಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿ, 3 ಕಾರುಗಳು ಸುಟ್ಟು ಭಸ್ಮವಾಗಿವೆ. ಹೊರಗೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಭಾಗಶಃ ಹಾನಿಯಾಗಿದೆ. ಸರ್ವಿಸ್ ಸೆಂಟರ್‌ನಲ್ಲಿ ಬೆಂಕಿಯಿಂದ ಹಾನಿಗೀಡಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: CBSE ಪೋರ್ಟಲ್ ಮೇಲೆ ಸೈಬರ್ ದಾಳಿ
ಕಾರು ಸರ್ವಿಸ್ ಸೆಂಟರ್‌ನಲ್ಲಿ ಕೆಲಸಗಾರರು ಯಾರೂ ಇರಲಿಲ್ಲ ಹಾಗಾಗಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳು ನಾಶವಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಬಂಗಾರಪೇಟೆ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಜುಲೈನಿಂದ ಶ್ರೀನಗರ ಏರ್‌ಪೋರ್ಟ್ ವಾರಕ್ಕೆರಡು ದಿನ ಕ್ಲೋಸ್
