ಬೆಂಗಳೂರು: ರಾಜಧಾನಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ವಿದ್ಯುತ್ ಬಿಲ್ ಮೂಲಕ ಕಸ ನಿರ್ವಹಣೆ ಸೆಸ್ ಸಂಗ್ರಹಕ್ಕೆ ಬಿಬಿಎಂಪಿ ಪ್ಲಾನ್ ಮಾಡ್ತಿದೆ.
ಬಿಬಿಎಂಪಿ ಸೆಸ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸಿದ್ರೇ ಸದ್ಯದಲ್ಲೇ ಸಿಲಿಕಾನ್ ಸಿಟಿ ಜನರ ಮನೆಗೆ ತಿಂಗಳಿಗೊಮ್ಮೆ ಕರೆಂಟ್ ಬಿಲ್ ಜೊತೆಗೆ ಗಾರ್ಬೇಜ್ ಬಿಲ್ ಬರಲಿದೆ.
Advertisement
Advertisement
2011 ರಿಂದ ಆಸ್ತಿ ತೆರಿಗೆ ಮೇಲೆ ಶೇ.19 ರಷ್ಟು ಸೆಸ್ ಸಂಗ್ರಹಿಸಲಾಗುತ್ತಿದೆ. ಆದರೆ ಇದರಿಂದ ಕಸ ನಿರ್ವಹಣಾ ವೆಚ್ಚದ ಶೇ.15 ರಷ್ಟು ಸಂಗ್ರಹಣೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯುತ್ ಬಿಲ್ ಮೂಲಕ ಪ್ರತಿ ತಿಂಗಳು ಕಸ ನಿರ್ವಹಣೆ ಸೆಸ್ ಸಂಗ್ರಹಿಸಲು ಬಿಬಿಎಂಪಿ ಮುಂದಾಗಿದೆ. ಇದರಿಂದ ಮಾಸಿಕ 48 ಕೋಟಿ ರೂ. ಆದಾಯದ ನಿರೀಕ್ಷೆಯಲ್ಲಿದೆ.
Advertisement
Advertisement
ವಾಣಿಜ್ಯ ಉತ್ಪಾದಕರಿಂದ 23.93 ಕೋಟಿ ರೂ. ಸಂಗ್ರಹದ ಗುರಿಯನ್ನು ಬಿಬಿಎಂಪಿ ಹೊಂದಿದೆ. ಈ ಆದಾಯದ ಮೂಲಕ ಗುತ್ತಿಗೆದಾರರ ಬಿಲ್, ಪೌರಕಾರ್ಮಿಕರ ಸಂಬಳಕ್ಕೆ ಅನುಕೂಲ ಮಾಡಿಕೊಳ್ಳಲು ತೀರ್ಮಾನಿಸಿದೆ ಎನ್ನಲಾಗಿದೆ. ಆದರೆ ಬಿಬಿಎಂಪಿ ಮುಖ್ಯ ಆಯುಕ್ತರು ಮಾತ್ರ ಇಂಥಾ ಯಾವುದೇ ಪ್ರಸ್ತಾವನೆಯನ್ನು ಬಿಬಿಎಂಪಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ತ್ಯಾಜ್ಯ ಉತ್ಪಾದಕರಿಗೆ ವಿದ್ಯುತ್ ಬಿಲ್ ಆಧರಿಸಿ ಪ್ರಸ್ತಾಪಿಸಿರುವ ಸೆಸ್ ವಿವರ ಹೀಗಿದೆ:
ವಿದ್ಯುತ್ ಬಿಲ್ ಕಸ ಸೆಸ್
* 200 ರೂ. ವರೆಗೆ 30 ರೂ.
* 200-500 ರೂ. 60 ರೂ.
* 500-1000 ರೂ. 100 ರೂ.
* 1001-2000 ರೂ. 200 ರೂ.
* 2001-3000 ರೂ. 350 ರೂ.
* 3000 ರೂ.ಗಿಂತ ಹೆಚ್ಚು 500 ರೂ.