ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಕಸ ಈಗ ಮತ್ತೆ ಸುದ್ದಿಯಲ್ಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಮುಷ್ಕರ ಆರಂಭ ಮಾಡಿದ್ದು ಕಸ ಎತ್ತುವುದನ್ನು ಸ್ಥಗಿತಗೊಳಿಸಿದ್ದಾರೆ
Advertisement
ಸೋಮವಾರದಿಂದ ಮಹಾನಗರಿಯಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ. ಹೈಕೋರ್ಟ್ ಆದೇಶದಂತೆ ನಮ್ಮನ್ನು ಖಾಯಂಗೊಳಿಸಿ ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ ಅಂತ ಪಟ್ಟು ಹಿಡಿದಿರೋ ಪೌರ ಕಾರ್ಮಿಕರು ಬೆಂಗಳೂರಿನ ಬನ್ನಪ್ಪಪಾರ್ಕ್‍ನಲ್ಲಿ ಅನಿರ್ದಿಷ್ಠಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಇದರಲ್ಲಿ 5 ಸಾವಿರ ಮಂದಿ ಪೌರ ಕಾರ್ಮಿಕರು ಭಾಗವಹಿಸಿದ್ದಾರೆ.
Advertisement
ಬೇಡಿಕೆ ಈಡೇರುವವರೆಗೆ ಕಸ ಎತ್ತಲ್ಲ ಎಂದು ಕಾರ್ಮಿಕರು ಸ್ಪಷ್ಟಪಡಿಸಿದ್ದಾರೆ. ಒಂದು ಕಡೆ ಮುಂಗಾರು ಮಳೆ ಕೂಡಾ ಬರುತ್ತಿರುವ ಕಾರಣ ಕಸ ವಿಲೇವಾರಿಯಾಗದೇ ರೋಗ-ರುಜಿನಗಳು ಶುರುವಾಗೋ ಆತಂಕ ಎದುರಾಗಿದೆ.