ಮಂಡ್ಯ: ಬೆಂಗಳೂರಿನಲ್ಲಿ ಕಸ ತೆಗೆಯಲು ಬ್ಲಾಕ್ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಸಚಿವರೊಬ್ಬರು ಟೆಂಡರ್ (Garbage Tender) ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.
Advertisement
ಮಂಡ್ಯದ (Mandya) ಪಾಂಡವಪುರ ಪಟ್ಟಣದಲ್ಲಿ ತಮಗೆ ನಡೆದ ಅಭಿನಂದನಾ ಹಾಗೂ ಕೃತಜ್ಞತಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲಾಕ್ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. ಅದರಲ್ಲೂ 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. 30 ವರ್ಷಕ್ಕೆ ನಾವು ನೀವು ಬದುಕಿರುತ್ತೀವೋ ಇಲ್ಲವೋ ಎಂದು ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: Karnataka Assembly Session| ಟಾರ್ಗೆಟ್ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು
Advertisement
Advertisement
ಪೇಪರ್ ಪೆನ್ನು ಕೇಳಿದವರಿಗೂ ಮಂಡ್ಯ ಜನ 6 ಸ್ಥಾನ ಕೊಟ್ಟರು. ಈಗ ಏನಾಗಿದೆ, ಕಿಕ್ ಬ್ಯಾಕ್ ತೆಗೆದುಕೊಳ್ಳುವುದರಲ್ಲಿ ಉಪಯೋಗ ಮಾಡ್ತಿದ್ದಾರೆ. ನೀವು ನನಗೆ ಕೊಟ್ಟ ಶಕ್ತಿ ರಾಜ್ಯದ ಅಭಿವೃದ್ಧಿಗೆ ಮುಡಿಪು. ನನಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಬೇಡ. ಜನರ ಋಣ ತೀರಿಸಿ ಮಣ್ಣಲ್ಲಿ ಮಣ್ಣಾಗುತ್ತೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!
Advertisement
ಇದಕ್ಕೂ ಮುನ್ನ ಮಾತನಾಡಿದ ಹೆಚ್‌ಡಿಕೆ, ಅಲ್ಲದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಇದು ನನ್ನ ಮನಸ್ಸಿಗೆ ಹೆಚ್ಚಿನ ನೋವುಂಟು ಮಾಡಿದೆ. ಕೇಂದ್ರ ಸಚಿವನಾದ ನಂತರ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದೆ. ಅಂದು ಸಂದಾಯವಾದ ಅರ್ಜಿಗಳಲ್ಲಿ 400ಕ್ಕೂ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು. ಆರ್ಥಿಕ ನೆರವಿಗೆ ಕೋರಿ 300ಕ್ಕೂ ಹೆಚ್ಚು ಅರ್ಜಿಗಳು, ನಿರುದ್ಯೋಗ ಸಮಸ್ಯೆ ಕುರಿತ 300ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮನೆ ಹಾಗೂ ನಿವೇಶನ ಕೋರಿದ ಅರ್ಜಿಗಳು ಬಂದಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್ ಬೆಂಬಲ!
ಜನ ನೀಡಿದ ಅರ್ಜಿಗಳ ವಿಲೇವಾರಿಗೆ ಮಂಡ್ಯದಲ್ಲಿ ಡಿಸಿ ಆಗಿ ಕೆಲಸ ಮಾಡಿದ್ದ ಕೃಷ್ಣಯ್ಯ ಅವ್ರನ್ನ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದೇನೆ. ಅವರು ನಿಮ್ಮ ಸಮಸ್ಯೆ ಆಲಿಸಿ ನನ್ನ ಗಮನಕ್ಕೆ ತರುತ್ತಾರೆ. ಪ್ರತಿ ಮಂಗಳವಾರ, ಬುಧವಾರ ಸಂಸದರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜನರಿಗೆ ಭರವಸೆ ನೀಡಿದರು.