ChamarajanagarCinemaDistrictsKarnatakaLatestMain PostSandalwood

ಕೋರ್ಟ್ ಮೆಟ್ಟಿಲೇರಿದ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದ

ಚಾಮರಾಜನಗರ: ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿವಾದವು ಇಂದು ಕೋರ್ಟ್ ಮೆಟ್ಟಿಲೇರಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕ್ರೌರ್ಯ ಮೆರೆಯುವ ದೃಶ್ಯವಿದ್ದು, ಅದಕ್ಕೆ ಮಹದೇಶ್ವರನ `ಸೋಜುಗಾದ ಸೂಜುಮಲ್ಲಿಗೆ’ ಜನಪದ ಹಾಡು ಬಳಕೆ ಮಾಡಲಾಗಿತ್ತು. ಈ ಹಿನ್ನೆಲೆ ಚಿತ್ರದ ವಿರುದ್ಧ ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ವಿಜಯ್‍ಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

ವಿಜಯ್‍ಕುಮಾರ್ ಅವರ ಈ ಅರ್ಜಿಯಲ್ಲಿ, ಚಿತ್ರದಲ್ಲಿ ಮಹದೇಶ್ವರನ ಹಾಡು ತೆಗೆಯಬೇಕು ಇಲ್ಲವೇ, ಮ್ಯೂಟ್ ಮಾಡಬೇಕು ಎಂದು ಸೂಚಿಸಲಾಗಿದೆ. ಅದು ಅಲ್ಲದೇ ಅವರು ಚಿತ್ರದ ನಿರ್ದೇಶಕ ರಾಜ್ ಬಿ.ಶೆಟ್ಟಿ, ನಟ ರಿಷಬ್ ಶೆಟ್ಟಿ, ನಿರ್ಮಾಪಕರಾದ ರವಿ ರೈ.ಬಿ.ವಿ, ವಚನಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಇದನ್ನೂ ಓದಿ:  ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ

‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕೊಲೆ ಮಾಡಿ ವಿಕೃತಿ ಮೆರೆಯುವ ದೃಶ್ಯಕ್ಕೆ ಮಾದಪ್ಪನ ಭಕ್ತಿ ಗೀತೆಯನ್ನು ಹಿನ್ನೆಲೆ ಸಂಗೀತವನ್ನಾಗಿ ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಲಕ್ಷಾಂತರ ಭಕ್ತರ ಭಾವನೆಗೆ ಧಕ್ಕೆಯಾಗುತ್ತಿದೆ. ಪರಿಣಾಮ ಇಂದು ನ್ಯಾಯಾಲಯ ಈ ಕುರಿತು ವಿಚಾರಣೆ ನಡೆಸಲಿದೆ. ಈ ಹಿನ್ನೆಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಮಾದಪ್ಪನ ಭಕ್ತರು ಸಹ ‘ಗರುಡ ಗಮನ ವೃಷಭ ವಾಹನ’ ಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published.

Back to top button