ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ (Mysuru) ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ಸುಮಾರು 10 ಮಂದಿಗೆ ಗಾಯವಾದ ಘಟನೆ ನಡೆದಿದೆ.
ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ.
Advertisement
Advertisement
ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ ಗಾಯಗಳಾಗಿದೆ. ಅವರಲ್ಲಿ ಇಬ್ಬರು ಮಕ್ಕಳಿದ್ದು, ಓರ್ವ 6 ವರ್ಷ ಹಾಗೂ ಇನ್ನೋರ್ವ 10 ವರ್ಷದ ಬಾಲಕನಾಗಿದ್ದಾನೆ. 6 ಮಂದಿ ಗಾಯಳು ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ದೇಹದ ಕೆಲ ಭಾಗ ಸುಟ್ಟುಹೋಗಿದೆ. ಇದನ್ನೂ ಓದಿ: ಕಳೆದ ಬಾರಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿತ್ತಾ?
Advertisement
Advertisement
ಗಾಯಳುಗಳು ಸಮೀಪದ ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರೆಲ್ಲರೂ ವೆಂಟಿಲೆಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಘಟನೆ ಬಗ್ಗೆ ಆಸ್ಪತ್ರೆ (Hospital) ಬಳಿ ಸ್ಥಳೀಯರು ಮಾಹಿತಿ ನೀಡಿದರು. ಮೈಸೂರಿನ ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ