ಮಡಿಕೇರಿ: ಗ್ಯಾಸ್ ಸಿಲಿಂಡರ್ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನ ಸ್ಥಿತಿ ಗಂಭೀರಗೊಂಡ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಬಳಿ ನಡೆದಿದೆ.
ಇಂದು ಮಧ್ಯಾಹ್ನ ಸುಂಟಿಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹಳ್ಳಕ್ಕೆ ಬಿಂದಿದೆ. ಗ್ಯಾಸ್ ಸಿಲಿಂಡರ್ ತುಂಬಿದ ಹಿನ್ನೆಲೆಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿಯಾಗಿದರೂ ಯಾವುದೇ ಅನುಹುತ ಸಂಭವಿಸಿಲ್ಲ. ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್: ಈರಣ್ಣ ಕಡಾಡಿ ಪಾರು
Advertisement
Advertisement
ಲಾರಿ ಪಲ್ಟಿ ಹೊಡೆದ ಪರಿಣಾಮದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆ ಸಂಬಂಧಿಸಿದಂತೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಲಾರಿ ಚಾಲಕನನ್ನು ಮಡಿಕೇರಿಯ ಜಿಲ್ಲಾ ಅಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಇದನ್ನೂ ಓದಿ: ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಕೋರ್ ಕಮಿಟಿಯಲ್ಲಿ ಚರ್ಚೆ: ಬೊಮ್ಮಾಯಿ