ಆನೇಕಲ್: ಗ್ಯಾಸ್ ಗೀಸರ್ ನ ಸಿಲಿಂಡರ್‍ನಿಂದ ಅನಿಲ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು ತಾಯಿ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ಮರಿಯಪ್ಪ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು, ಜಯಮ್ಮ(55) ಆಕೆಯ ಮಗ ಸತೀಶ್ (22) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸ್ನಾನಕ್ಕೆ ನೀರು ಕಾಯಿಸುವ ವೇಳೆ ಗ್ಯಾಸ್ ಆನ್ ಮಾಡಿದಾಗ ಸಿಲಿಂಡರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮನೆಯಲ್ಲಿನ ಕಿಟಕಿ ಗಾಜುಗಳು ಪುಡಿಪುಡಿಯಾಗಿದೆ ಹಾಗೂ ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
Advertisement
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಆನೇಕಲ್ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.