ಕಾರವಾರ: ಕೆಮಿಕಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್‍ನ ಇಡಗುಂದಿ ಬಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ ಸಂಚಾರವನ್ನು ಕೆಲಕಾಲ ಬಂದ್ ಮಾಡಲಾಗಿತ್ತು, ಇದೀಗ ಸಂಚಾರ ಮುಕ್ತವಾಗಿದೆ.
Advertisement
ಬೆಳಗ್ಗೆ ಸುಮಾರು 5.30ರಿಂದ 5.45ರ ನಡುವೆ ಅಂಕೋಲ ಭಾಗದ ಕಡೆ ತೆರಳುತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷದಿಂದ ಘಾಟಿಯಲ್ಲಿ ಪಲ್ಟಿಯಾಗಿ ಸ್ಫೋಟಗೊಂಡಿದೆ. ಈ ವೇಳೆ ಚಾಲಕನಿಗೆ ಅಲ್ಪ ಗಾಯವಾಗಿದ್ದು ತಕ್ಷಣದಲ್ಲಿ ಆತನನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ಮತ್ತೆ ಕಂಪಿಸಿದ ಭೂಮಿ – ಸಿದ್ದರಾಮಯ್ಯಗೂ ಭೂಕಂಪನದ ಅನುಭವ
Advertisement
Advertisement
ಸ್ಫೋಟದಿಂದ 500ಮೀಟರ್‍ಗೂ ಹೆಚ್ಚು ದೂರು ಬೆಂಕಿ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. 300-400 ಮೀಟರ್ ದೂರಗಳಷ್ಟು ಏನಾಗಿದೆ ಅನ್ನೋ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಕಮಲಾನಗರದಲ್ಲಿ ಕಟ್ಟಡ ಕುಸಿಯೋ ಭೀತಿ!
Advertisement
ಯಲ್ಲಾಪುರದ ಇಡಗುಂದಿ ಬಳಿ ಪಲ್ಟಿಯಾಗಿ ಬಿದ್ದಿರುವ ಕೆಮಿಕಲ್ ಟ್ಯಾಂಕರ್‍ನಿಂದ ಹೊರಕ್ಕೆ ಬಿದ್ದು ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.