ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ್ದ ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಇಂದು ಮುಂಜಾನೆ ಉಪ್ಪಿನಂಗಡಿ ಬಳಿಯ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಬಿದ್ದ ರಭಸಕ್ಕೆ ಟ್ಯಾಂಕರಿನಲ್ಲಿದ್ದ ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾಗುತ್ತಿದೆ.
Advertisement
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸುಪಾಸಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಬೆಂಕಿ ಉರಿಸದಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕಾರ್ಯಾಚರಣೆ ಮುಗಿಯುವವರೆಗೂ ಮಂಗಳೂರು ಹಾಗೂ ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.
Advertisement
Advertisement
ಪೆರ್ನೆ ದುರಂತ:
2013ರ ಏಪ್ರಿಲ್ 9ರಂದು ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿಬಿದ್ದು, ಬೆಂಕಿ ಹತ್ತಿಕೊಂಡ ಪರಿಣಾಮ ಪರಿಸರದ ಮನೆಗಳಿಗೆ ಅಗ್ನಿ ವ್ಯಾಪಿಸಿ ಸ್ಥಳೀಯರು ಮತ್ತು ಇತರ ವಾಹನಗಳಲ್ಲಿ ಬಂದ ಒಟ್ಟು 13 ಮಂದಿ ಬಲಿಯಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv