ನವದೆಹಲಿ: ಉದ್ಯಮಿ ಗೌತಮ್ ಅದಾನಿ ಸಮೂಹ (Gautam Adani Group) ಸಂಸ್ಥೆಗಳ ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ಬೆನ್ನಲ್ಲೇ 20 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಮುಂದಾಗಿದ್ದ ಎಫ್‌ಪಿಒ ಪ್ರಕ್ರಿಯೆಯನ್ನೇ ರದ್ದು ಮಾಡಿದೆ..
ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ ಪ್ರಕಟಿಸಿದ್ದ ವರದಿ ವಿಶ್ವಾದ್ಯಂತ ಸದ್ದು ಮಾಡಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಅದಾನಿ (Gautam Adani) ಸಮೂಹ ಸಂಸ್ಥೆಗಳ ಷೇರು ಕಳೆದ ಮೂರ್ನಾಲ್ಕು ದಿನಗಳಲ್ಲಿ ಮತ್ತಷ್ಟು ಕುಸಿತ ಕಂಡ ಬೆನ್ನಲ್ಲೇ ಅದಾನಿ ಕಂಪನಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
Advertisement
Advertisement
20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ(ಮುಂದುವರಿದ ಸಾರ್ವಜನಿಕ ಕೊಡುಗೆ ಅಥವಾ ಹೊಸದಾಗಿ ಷೇರುಗಳನ್ನು ಮಾರುಕಟ್ಟೆ ಬಿಡುಗಡೆ) ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಆದರೆ ಈಗ ಎಫ್‌ಪಿಒ ರದ್ದುಗೊಳಿಸಿ, ಹೂಡಿಕೆದಾರರಿಗೆ ಹಣ ವಾಪಸ್ ಕೊಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಗೌತಮ್ ಅದಾನಿ (Gautam Adani) ಪ್ರತಿಕ್ರಿಯಿಸಿ ಹೂಡಿಕೆದಾರರ ಆಸಕ್ತಿ ಬಹಳ ಮುಖ್ಯ ಎಂದು ಹೇಳಿದ್ದಾರೆ.
Advertisement
ನಮ್ಮ ಷೇರು (Share Market) ಮೌಲ್ಯ ಕುಸಿದಿದೆ. ಈ ಸಂದರ್ಭದಲ್ಲಿ ಎಫ್‌ಪಿಒನೊಂದಿಗೆ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ಅದಾನಿ ತಿಳಿಸಿದ್ದಾರೆ. ಇದನ್ನೂ ಓದಿ: ಇದು ಭಾರತದ ಮೇಲೆ ನಡೆಸಿದ ವ್ಯವಸ್ಥಿತ ದಾಳಿ – ಆರೋಪಗಳಿಗೆ 413 ಪುಟಗಳ ಉತ್ತರ ನೀಡಿದ ಅದಾನಿ ಗ್ರೂಪ್
Advertisement
ವಾಣಿಜ್ಯೋದ್ಯಮಿಯಾಗಿ 4 ದಶಕಗಳ ನನ್ನ ಪ್ರಯಾಣದಲ್ಲಿ ಹೂಡಿಕೆದಾರ ಸಮುದಾಯದಿಂದ ಅಗಾಧ ಬೆಂಬಲ ಪಡೆದಿದ್ದೇನೆ. ಜೀವನದಲ್ಲಿ ನಾನೇನಾದರೂ ಒಂದಷ್ಟು ಸಾಧಿಸಿದ್ದೇನೆಂದರೆ, ಅದು ಅವರ ನಂಬಿಕೆಯಿಂದ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ನನ್ನ ಎಲ್ಲಾ ಯಶಸ್ಸಿಗೆ ನಾನು ಅವರಿಗೆ ಋಣಿಯಾಗಿದ್ದೇನೆ. ನನಗೆ ನನ್ನ ಹೂಡಿಕೆದಾರರ ಹಿತಾಸಕ್ತಿ ಬಹಳ ಮುಖ್ಯ. ಮಿಕ್ಕೆಲ್ಲವೂ ಗೌಣ. ಆದ್ದರಿಂದ ಸಂಭಾವ್ಯ ನಷ್ಟದಿಂದ ಹೂಡಿಕೆದಾರರನ್ನು ರಕ್ಷಿಸಲು ನಾವು FPO ಅನ್ನು ಹಿಂತೆಗೆದುಕೊಂಡಿದ್ದೇವೆ ಎಂದು ಮಾತನಾಡಿದ್ದಾರೆ.
20,000 ಕೋಟಿ ರೂ. ಮೌಲ್ಯದ ಎಫ್‌ಪಿಒಗೆ ಅದಾನಿ ಕಂಪನಿಯು ಇತ್ತೀಚೆಗಷ್ಟೇ ಚಾಲನೆ ನೀಡಿತ್ತು. ಪ್ರತಿ ಷೇರಿಗೆ 3,112ರಿಂದ 3,276 ರೂ. ಆಫರ್ ಮಾಡಲಾಗಿತ್ತು. ಎಫ್‌ಪಿಒ ಬಿಡ್ ಸಲ್ಲಿಕೆ ಅವಧಿ ಮಂಗಳವಾರಷ್ಟೇ ಪೂರ್ಣಗೊಂಡಿತ್ತು.
Media statement – II on a report published by Hindenburg Research pic.twitter.com/Yd2ufHUNRX
— Adani Group (@AdaniOnline) January 26, 2023
ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ ಪ್ರಕಟಿಸಿದ ವರದಿ ಪರಿಣಾಮ ಅದಾನಿ ಸಮೂಹ ಸಂಸ್ಥೆಗಳ ಷೇರಿನಲ್ಲಿ ಕುಸಿತ ಆಗಿದೆ. ಷೇರುಗಳು ಹೀಗೇ ಕುಸಿಯುತ್ತಾ ಸಾಗಿದರೆ, ಶೀಘ್ರದಲ್ಲೇ ಅವರು ಏಷ್ಯಾದ ಶ್ರೀಮಂತ ವ್ಯಕ್ತಿಯ ಪಟ್ಟದಿಂದಲೂ ಕೆಳಗಿಳಿಯುವ ಸಾಧ್ಯತೆಗಳು ದಟ್ಟವಾಗಿವೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k