ಮುಂಬೈ: ರಾಹುಲ್ ದ್ರಾವಿಡ್ ಅವರ ಬಳಿಕ ಟೀಂ ಇಂಡಿಯಾ ಮುಖ್ಯಕೋಚ್ (Team India Head Coach) ಯಾರಾಗ್ತಾರೆ ಎಂಬ ಕುತೂಹಲಕ್ಕೆ ಬಿಸಿಸಿಐ ತೆರೆ ಎಳೆದಂತೆ ಕಾಣುತ್ತಿದೆ. ಏಕೆಂದರೆ ರಾಹುಲ್ ದ್ರಾವಿಡ್ ಅವರು ಕೋಚ್ ಸ್ಥಾನದಲ್ಲಿ ಮುಂದುವರಿಯಲು ಮತ್ತೆ ಅರ್ಜಿ ಸಲ್ಲಿಸುವುದಿಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಅವರ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರ ಹೆಸರು ಕೇಳಿಬಂದಿದೆ.
ರಾಹುಲ್ ದ್ರಾವಿಡ್ (Rahul Dravid) ಅವರ ನಂತರ ಟೀಂ ಇಂಡಿಯಾ ಮುಖ್ಯಕೋಚ್ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಗೌತಮ್ ಗಂಭೀರ್ ಅವರಿಗೆ ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಆದ್ರೆ ಈ ಬಗ್ಗೆ ಜಯ್ ಶಾ ಅವರಾಗಲಿ ಬಿಸಿಸಿಐ (BCC) ಆಗಲಿ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: IPL 2024: ಮಳೆಗೆ ಪಂದ್ಯ ಬಲಿ – ಸನ್ ರೈಸರ್ಸ್ ಪ್ಲೇ ಆಫ್‌ಗೆ, ಟೈಟಾನ್ಸ್ ಮನೆಗೆ
Advertisement
Advertisement
ಹೌದು. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿ ಬಳಿಕ ದ್ರಾವಿಡ್ ಅವರ ಮುಖ್ಯಕೋಚ್ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿದೆ. ದ್ರಾವಿಡ್ ಅವರ ಸ್ಥಾನಕ್ಕೆ ಅರ್ಹರನ್ನ ಆಯ್ಕೆ ಮಾಡಲು ಬಿಸಿಸಿಐ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಮೇ 27 ರಂದು ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
Advertisement
ಈ ಮೊದಲು ಟೀಂ ಇಂಡಿಯಾ ಮುಖ್ಯಕೋಚ್ ಸ್ಥಾನಕ್ಕೆ ನ್ಯೂಜಿಲೆಂಡ್‌ನ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರನ್ನು ಆಯ್ಕೆ ಮಾಡುವಲ್ಲಿ ಬಿಸಿಸಿಐ ಉತ್ಸುಕವಾಗಿತ್ತು. ಈ ನಡುವೆ ಗೌತಮ್ ಗಂಭೀರ್ ಅವರ ಹೆಸರೂ ಕೇಳಿಬಂದಿದೆ. ಈಗಾಗಲೇ ಬಿಸಿಸಿಐ ಗಂಭೀರ್ ಅವರನ್ನ ಸಂಪರ್ಕಿಸಿದ್ದು, 2024ರ ಟಿ20 ವಿಶ್ವಕಪ್ ಬಳಿಕ ಅಧಿಕಾರ ವಹಿಸಿಕೊಳ್ಳವಂತೆ ಮನವಿ ಮಾಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನಾಳೆ ಆರ್‌ಸಿಬಿ ಮ್ಯಾಚ್ – ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫುಡ್ ಟೆಸ್ಟ್‌ಗೆ ಮುಂದಾದ ಸರ್ಕಾರ
Advertisement
ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್ ಗೆದ್ದುಕೊಟ್ಟಿರುವ ಗೌತಮ್ ಗಂಭೀರ್ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದ ಗಂಭೀರ್, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸುವಂತೆ ಮಾಡಿದ್ದರು. ಇದಘ ಗಂಭೀರ್ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡದ ಮುಖ್ಯಕೋಚ್ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್ ಸಹ ಪ್ಲೇ ಆಫ್ ಪ್ರವೇಶಿಸಿದೆ. ಆದ್ರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್ ಅವರಿಗಿಲ್ಲ.