ಮುಂಬೈ: ಟೀಂ ಇಂಡಿಯಾದ ಮುಖ್ಯಕೋಚ್ ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆಗಳು ಕೆಲ ದಿನಗಳಿಂದ ನಡೆಯುತ್ತಿವೆ. ಈ ಬಗ್ಗೆ ಸ್ವತಃ ಗಂಭೀರ್ ಅವರೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈಗಾಗಲೇ ಟೀಂ ಇಂಡಿಯಾದ ಮುಖ್ಯ ಕೋಚ್ (eam India Head Coach) ಹುದ್ದೆಯ ಆಕಾಂಕ್ಷಿಯಾಗಿರುವ ಗಂಭೀರ್ ಅವರನ್ನು ಬಿಸಿಸಿಐ ಸಲಹಾ ಸಮಿತಿಯು ಸಂದರ್ಶನ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೆ ಶ್ರೀಲಂಕಾ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ವೇಳೆಗೆ ಗಂಭೀರ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ನಡುವೆ ಮುಖ್ಯ ಕೋಚ್ ಹುದ್ದೆಗೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಭೀರ್, ಈ ಸಂದರ್ಭದಲ್ಲಿ ಉತ್ತರಿಸುವುದು ಕಷ್ಟ. ನಾನು ಭವಿಷ್ಯದ ಬಗ್ಗೆ ತುಂಬಾ ಯೋಚಿಸುತ್ತಿಲ್ಲ. ನೀವು ನನಗೆ ಕಠಿಣವಾದ ಪ್ರಶ್ನೆಗಳನ್ನು ಕೇಳಿ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ನಗುಮುಖದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
‘ಈಗ ಇರುವ ಜವಾಬ್ದಾರಿಯನ್ನು (ಕೆಕೆಆರ್ ತಂಡದ ಮೆಂಟರ್) ಆನಂದಿಸುತ್ತಿದ್ದೇನೆ. ಈಗಷ್ಟೇ ಐಪಿಎಲ್‌ನಲ್ಲಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಕ್ಷಣವನ್ನು ಆನಂದಿಸೋಣ. ಭವಿಷ್ಯದಲ್ಲಿ ಏನು ನಡೆಯಬೇಕೋ ಅದು ನಡೆಯಲಿದೆ. ಸದ್ಯ ತುಂಬಾ ಖುಷಿಯಲ್ಲಿದ್ದೇನೆ. ಕೋಲ್ಕತ್ತಾ ಜನರನ್ನು ಖುಷಿಪಡಿಸುವುದೇ ನನ್ನ ಕೆಲಸ. ನೀವು ಖುಷಿಪಟ್ಟರೆ ನನಗೂ ಖುಷಿ ಎಂದು ಹೇಳಿದ್ದಾರೆ.
ಗಂಭೀರ್ ಕೋಚಿಂಗ್ ಅನುಭವ ಹೇಗಿದೆ?
ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್ ಗೆದ್ದುಕೊಟ್ಟಿರುವ ಗೌತಮ್ ಗಂಭೀರ್ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದ ಗಂಭೀರ್, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸುವಂತೆ ಮಾಡಿದ್ದರು. ಇದಘ ಗಂಭೀರ್ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡದ ಮುಖ್ಯಕೋಚ್ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್ ಸಹ ಪ್ಲೇ ಆಫ್ ಪ್ರವೇಶಿಸಿದೆ. ಆದ್ರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್ ಅವರಿಗಿಲ್ಲ.