ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್‌ಗೆ (Lucknow Super Giants) ಗುಡ್‌ಬೈ ಹೇಳಿದ್ದಾರೆ.
ಅಧಿಕೃತವಾಗಿ ಎಲ್‌ಎಸ್‌ಜಿ (LSG) ತೊರೆದು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡಕ್ಕೆ ಮತ್ತೆ ಮರಳಿದ್ದಾರೆ. ಕೆಕೆಆರ್ ತಂಡದಲ್ಲಿದ್ದಾಗ ನಾಯಕರಾಗಿ ಎರಡು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು. ಕೆಕೆಆರ್‌ನ ಸಿಇಒ ವೆಂಕಿ ಮೈಸೂರು (Venky Mysuru) ಅವರು ಬುಧವಾರ ಈ ಸಂಬಂಧ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಲಕ್ನೋದಲ್ಲಿ ಫೈನಲ್ ನಡೆಯುತ್ತಿದ್ದರೆ ಭಾರತ ಗೆಲ್ಲುತ್ತಿತ್ತು: ಮೋದಿ ಪಿಚ್ ಬಗ್ಗೆ ಅಖಿಲೇಶ್ ಟೀಕೆ
Advertisement
Advertisement
ಗಂಭೀರ್ ಮೆಂಟರ್ ಆಗಿ ಬರುತ್ತಿರುವುದನ್ನು ಕೆಕೆಆರ್ ಸಹ-ಮಾಲೀಕ ಶಾರುಖ್ ಖಾನ್ ಸ್ವಾಗತಿಸಿದ್ದಾರೆ. ಫ್ರಾಂಚೈಸಿಗೆ ಗಂಭೀರ್ ಆಗಮನವನ್ನು ‘ನಾಯಕನ ಹಿಂತಿರುಗುವಿಕೆ’ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ICC ಹೇಳಿದ್ದೇನು?
Advertisement
ಗಂಭೀರ್ ಎರಡು ವರ್ಷಗಳ ಕಾಲ LSG ಯ ಸಲಹೆಗಾರರಾಗಿ ಪಾತ್ರ ನಿರ್ವಹಿಸಿದ್ದರು. IPL 2022 ಆವೃತ್ತಿಯಲ್ಲಿ ತಂಡ ಫೈನಲ್ ತಲುಪಲು ಅಪಾರ ಶ್ರಮಿಸಿದ್ದರು. 2023 ರ ಆವೃತ್ತಿಯಲ್ಲಿ LSG ಲೀಗ್ ಸ್ಟ್ಯಾಂಡಿಂಗ್‌ನಲ್ಲಿ ಮೂರನೇ ಸ್ಥಾನ ಗಳಿಸಿತು. ಆದರೆ ಸತತವಾಗಿ ಎರಡನೇ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ವಿಶ್ವಕಪ್ ಮುಗೀತು, T20 ಹಂಗಾಮ ಶುರು – ಟೀಂ ಇಂಡಿಯಾದ ಮುಂದಿದೆ ಸಾಲು ಸಾಲು ಸರಣಿ!
Advertisement
ಭಾವನಾತ್ಮಕ ಪೋಸ್ಟ್ ಮೂಲಕ ಗಂಭೀರ್ ಲಕ್ನೋ ತಂಡದಿಂದ ನಿರ್ಗಮಿಸುವುದಾಗಿ ಘೋಷಿಸಿದ್ದಾರೆ. “ಲಕ್ನೋ ಸೂಪರ್ ಜೈಂಟ್ಸ್‌ನೊಂದಿಗಿನ ನನ್ನ ಪ್ರಯಾಣದ ಅಂತ್ಯವನ್ನು ನಾನು ಘೋಷಿಸುತ್ತಿದ್ದೇನೆ. ಈ ಪ್ರಯಾಣವನ್ನು ಸ್ಮರಣೀಯವಾಗಿಸಿದ ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಪ್ರತಿಯೊಬ್ಬರ ಬಗ್ಗೆಯೂ ಅಪಾರ ಪ್ರೀತಿಯಿದ್ದು, ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಈ ಗಮನಾರ್ಹ ಫ್ರಾಂಚೈಸ್ ಅನ್ನು ರಚಿಸುವಾಗ ಸ್ಪೂರ್ತಿದಾಯಕ ನಾಯಕತ್ವಕ್ಕಾಗಿ ಮತ್ತು ನನ್ನ ಎಲ್ಲಾ ಪ್ರಯತ್ನಗಳಿಗೆ ಬೆಂಬಲ ನೀಡಿದ್ದಕ್ಕಾಗಿ ನಾನು ಡಾ. ಸಂಜೀವ್ ಗೋಯೆಂಕಾ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ತಂಡವು ಭವಿಷ್ಯದಲ್ಲಿ ಅದ್ಭುತಗಳನ್ನು ಮಾಡುತ್ತದೆ. ಪ್ರತಿಯೊಬ್ಬ LSG ಅಭಿಮಾನಿಯನ್ನು ಹೆಮ್ಮೆಪಡಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಆಲ್ ದಿ ಬೆಸ್ಟ್ LSG ಬ್ರಿಗೇಡ್” ಎಂದು ಎಕ್ಸ್‌ನಲ್ಲಿ ಗಂಭೀರ್ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: 3 ಬಾರಿ ಆತ್ಮಹತ್ಯೆಗೆ ಯೋಚಿಸಿದ್ದ ಶಮಿ – ಕೋಪವನ್ನೇ ಶಕ್ತಿಯಾಗಿಸಿ ಪಿಚ್‌ಗೆ ಇಳಿದಿದ್ದೇ ರೋಚಕ!