ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಂಡ್ಯದ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ (Bengaluru-Mysuru Expressway) ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಂಡ್ಯ (Mandya) ಜಿಲ್ಲಾಡಳಿತ ಸಂಚಾರಕ್ಕೆ ನಿರ್ಬಂಧ ಹೇರಿತ್ತು. ಕಾರ್ಯಕ್ರಮ ಮುಗಿಸಿ ಮೋದಿ ಮಂಡ್ಯದಿಂದ ಹೊರಡುತ್ತಿದ್ದಂತೆ ನಿರ್ಬಂಧ ತೆರವು ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್ಡಿಕೆ
Advertisement
Advertisement
ಸಂಚಾರಕ್ಕೆ ಮುಕ್ತ ಅವಕಾಶ ನೀಡಿರುವ ಬಗ್ಗೆ ವಾರ್ತಾ ಇಲಾಖೆ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ