ಬೆಂಗಳೂರು: ಭಾರತ ರತ್ನ ಪ್ರೊ. ಸಿಎನ್‌ಆರ್ ರಾವ್ ಅವರಿಗೆ ಯಾವುದೇ ಎಸ್‌ಐಆರ್ (SIR) ನೋಟಿಸ್ ಜಾರಿ ಮಾಡಿಲ್ಲ ಅಂತಾ ಜಿಬಿಎ ಸ್ಪಷ್ಟಪಡಿಸಿದೆ.
ಪ್ರೊಫೆಸರ್ ಸಿ.ಎನ್ ರಾವ್ (CNR Rao) ಅವರು 2002ನೇ ಸಾಲಿನ 76-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿದ್ರು. ಅವ್ರ ಹೆಸರು ರಾಮ ಎಂದು ನಮೂದಾಗಿತ್ತು. ಪ್ರಸ್ತುತ 157-ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ-59 ರಲ್ಲಿ ಕ್ರಮ ಸಂಖ್ಯೆ 187ರಲ್ಲಿ ಸಿಎನ್‌ಆರ್ ರಾವ್ ಎಂಬ ಹೆಸರಿನೊಂದಿಗೆ ಮತದಾರರಾಗಿ ನೋಂದಾಯಿತರಾಗಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅಂಗವಾಗಿ ನಡೆಯುವ ವಿಚಾರಣೆಗೆ ಸಂಬಂಧಿಸಿದಂತೆ, ಮತದಾರರ ಪಟ್ಟಿಯಲ್ಲಿ ಹೆಸರಿನಲ್ಲಿ ವ್ಯತ್ಯಾಸವಿರುವ ಹಿನ್ನೆಲೆಯಲ್ಲಿ, ಯಾವುದೇ ನೋಟಿಸ್ ಜಾರಿ ಮಾಡದೇ, ಅಂತಿಮ ಮತದಾರರ ಪಟ್ಟಿಗೆ ಅವರ ಹೆಸರನ್ನ ಸೇರಿಸಲು ಶಿಫಾರಸು ಮಾಡಲಾಗಿದೆ. ಅದರಂತೆ, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅಂತಾ ಜಿಬಿಎ ಸ್ಪಷ್ಟನೆ ನೀಡಿದೆ.

