– ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿರಲಿದೆ ಎಂದ ನಟ
ತುಮಕೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರಿಂದು ಇಲ್ಲಿನ ಸಿದ್ಧಗಂಗಾ ಮಠಕ್ಕೆ (Siddaganga Mutt) ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನದ ಪಡೆದರು. ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಶಿವಮೊಗ್ಗದ (Shivamogga) ಜನ ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆಯಿದೆ. ಪ್ರಚಾರ ಕಾರ್ಯವೂ ಭರದಿಂದ ಸಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಶಯ ಈಡೇರಿದೆ ಎಂದು ರಾಜ್ಯ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿ
ಶಿವಮೊಗ್ಗದಲ್ಲಿ ಇಂದಿಗೂ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಬಗರ್‌ಹುಕುಂ, ಕುಡಿಯುವ ನೀರು, ರಸ್ತೆ-ಚರಂಡಿ ಹೀಗೆ ಹಲವು ತೊಂದರೆಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಗೀತಾ ಅವರು ಗೆದ್ದರೆ ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಎ1, ಪ್ರಜ್ವಲ್ ರೇವಣ್ಣ ಎ2 ಆರೋಪಿ – ಮನೆ ಕೆಲಸದಾಕೆಯಿಂದ ದೂರು
ಪತಿಯಾಗಿ ಗೀತಾಗೆ ಬೆಂಬಲ ಸೂಚಿಸುವುದು ನನ್ನ ಜವಾಬ್ದಾರಿ. ಈ ಸಲ ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚುನಾವಣೆಯ ಫಲಿತಾಂಶ ಗೀತಾಳ ಪರವಾಗಿ ಇರಲಿದೆ ಎಂಬ ನಂಬಿಕೆ ಇದೆ. ತಂದೆಯವರು ಮಠದ ಬಗ್ಗೆ ಅಪಾರ ಗೌರವ ಹೊಂದಿದ್ದರು. ಇಲ್ಲಿನ ಪರಿಸರ ನನಗೆ ಇಷ್ಟ. ಆದ್ದರಿಂದ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆಂದು ತಿಳಿಸಿದರು. ಇದನ್ನೂ ಓದಿ: SC-ST ಸಮುದಾಯಗಳಿಗೆ ಸೇರಬೇಕಿದ್ದ 11,000 ಕೋಟಿ ಹಣವನ್ನ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ: ಮೋದಿ ಕೆಂಡ
ಈ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಅನಿಲ್‌ಕುಮಾರ್ ತಡಕಲ್, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವಿಜಯ ರಾಘವೇಂದ್ರ, ಮಠದ ಆಡಳಿತಾಧಿಕಾರಿ ನಾಗರಾಜ, ಮುಖಂಡರಾದ ರಾಧಾ ವಿಜಯ್, ದಯಾನಂದ ಇತರರು ಹಾಜರಿದ್ದರು.