ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ (Shivaraj Kumar) ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivraj Kumar) ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಸೊರಬ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು. ಸಹೋದರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.
ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿದ ಮಧು ಬಂಗಾರಪ್ಪ ಸೊರಬ ಕ್ಷೇತ್ರದ ಗೆಲುವಿಗೆ ಗೀತಾ ಅವರು ಎಷ್ಟು ಮುಖ್ಯರಾಗುತ್ತಾರೆ ಎನ್ನುವುದರ ಕುರಿತು ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ
ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿದ್ದಾರೆ ಗೀತಾ ಶಿವರಾಜ್ ಕುಮಾರ್. ಒಂದು ಬಾರಿ ಚುನಾವಣೆಗೂ ಅವರು ಸ್ಪರ್ಧಿಸಿ ಸೋತಿದ್ದಾರೆ. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗುವ ಮೂಲಕ ತಮ್ಮ ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ (D.K. Shivakumar) ಮತ್ತು ಶಿವರಾಜ್ ಕುಮಾರ್ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಗೀತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಮಾತುಕತೆ ಕೂಡ ನಡೆದಿತ್ತು. ಆ ಮಾತುಕತೆ ಫಲಪ್ರದವಾಗಿದೆ. ಹಾಗಾಗಿ ಗೀತಾ ಶಿವರಾಜ್ ಕುಮಾರ್ ಇಂದು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿಯಲಿದ್ದಾರೆ.