– ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್
ಶಿವಮೊಗ್ಗ: ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಶಿವಮೊಗ್ಗದಲ್ಲಿ ಚುನಾವಣಾ ಕಾರ್ಯಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಶುಕ್ರವಾರ (ಫೆ.8) ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 9 ರಾಜ್ಯಗಳ 39 ಕ್ಷೇತ್ರಗಳಿಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್‌ಕುಮಾರ್ ಅವರ ಹೆಸರನ್ನು ಘೋಷಣೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕೈಜೋಡಿಸಿದ ಟಿಡಿಪಿ, ಜೆಎಸ್‌ಪಿ – ಆಂಧ್ರದ ಲೋಕಸಭಾ, ವಿಧಾನಸಭಾ ಚುನಾವಣೆಗೆ ಮೈತ್ರಿ ಸ್ಪರ್ಧೆ
Advertisement
Advertisement
ಟಿಕೆಟ್ ಘೋಷಣೆಯಾದ ಮರುದಿನವೇ ಗೀತಾ ಶಿವರಾಜ್‌ಕುಮಾರ್ ಅವರು, ಚುನಾವಣಾ ಕಾರ್ಯಗಳಿಗಾಗಿ ಬಾಡಿಗೆಮನೆ (Rent House) ಪಡೆದಿದ್ದಾರೆ. ಚುನಾವಣಾ ಪ್ರಚಾರ ಕಾರ್ಯಗಳಿಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಶಿವಮೊಗ್ಗದ ಕಲ್ಲಹಳ್ಳಿ ಬಡಾವಣೆಯಲ್ಲಿ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೇ ಮನೆಯೊಂದನ್ನ ಬಾಡಿಗೆಗೆ ಪಡೆದುಕೊಂಡಿದ್ದಾರೆ.
Advertisement
ಇಲ್ಲಿಯೇ ವಾರ್ ರೂಂ ಸ್ಥಾಪಿಸಲಾಗುತ್ತದೆ. ಜೊತೆಗೆ ಚುನಾವಣಾ ಪ್ರಚಾರ ಕಾರ್ಯಗಳ ಕುರಿತು ಮಹತ್ವದ ಸಿದ್ಧತೆಗಳನ್ನು ಇಲ್ಲಿಯೇ ಮಾಡಿಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ – ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ
Advertisement
ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
ವಿಜಯಪುರ (SC) – ಹೆಚ್.ಆರ್. ಆಲಗೂರು (ರಾಜು)
ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
ಹಾಸನ – ಎಂ. ಶ್ರೇಯಸ್ ಪಟೇಲ್
ತುಮಕೂರು – ಎಸ್.ಪಿ ಮುದ್ದಹನುಮೇಗೌಡ
ಮಂಡ್ಯ – ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್