ನವದೆಹಲಿ: ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಹಂಚಿಕೊಂಡ ಅಂಕಿ-ಅಂಶಗಳ ವಿಶ್ಲೇಷಣೆಯ ಪ್ರಕಾರ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಒಟ್ಟು 8,337 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 1,644 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಎಂದಿದೆ.
ಈ ಅಭ್ಯರ್ಥಿಗಳ ಪೈಕಿ 1,188 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಕೊಲೆ, ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷದ ಭಾಷಣಕ್ಕೆ ಸಂಬಂಧಿಸಿದ ಆರೋಪಗಳಿವೆ.
Advertisement
Advertisement
ಅಭ್ಯರ್ಥಿಗಳ ಹಂತ-ವಾರು ವಿವರ:
ಹಂತ 1: 1,618 ಅಭ್ಯರ್ಥಿಗಳಲ್ಲಿ 252 ಮಂದಿ ಮೇಲೆ ಕ್ರಿಮಿನಲ್ ಪ್ರಕರಣ ಹಾಗೂ 161 ಮಂದಿ ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 2: 1,192 ಅಭ್ಯರ್ಥಿಗಳಲ್ಲಿ 250 ಮಂದಿ ಮೇಲೆ ಕ್ರಿಮಿನಲ್ ಆರೋಪ ಹಾಗೂ 167 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ.
ಹಂತ 3: 1,352 ಅಭ್ಯರ್ಥಿಗಳಲ್ಲಿ 244 ಮಂದಿ ಮೇಲೆ ಕ್ರಿಮಿನಲ್ ಮೊಕದ್ದಮೆ, 172 ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 4: 1,710 ಅಭ್ಯರ್ಥಿಗಳ ಪೈಕಿ 360 ಮಂದಿ ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ. 274 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊಂದಿದ್ದು, 4ನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
Advertisement
Advertisement
ಹಂತ 5: 695 ಅಭ್ಯರ್ಥಿಗಳಲ್ಲಿ 159 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಮತ್ತು 122 ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 6: 866 ಅಭ್ಯರ್ಥಿಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ 180 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. 141 ಮಂದಿ ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಹಂತ 7: 904 ಅಭ್ಯರ್ಥಿಗಳಲ್ಲಿ 199 ಅಭ್ಯರ್ಥಿಗಳು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ, 151 ಮಂದಿಯ ವಿರುದ್ಧ ಗಂಭೀರ ಕ್ರಿಮಿನಲ್ ಮೊಕದ್ದಮೆಗಳಿವೆ.
ಒಟ್ಟಾರೆ ಎಡಿಆರ್ ಒಟ್ಟು 8,360 ಅಭ್ಯರ್ಥಿಗಳ ಪೈಕಿ 8,337 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ. ಮೊದಲ ಐದು ಹಂತದ ಮತದಾನ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13 ಮತ್ತು ಮೇ 20 ರಂದು ನಡೆಯಿತು. ಮುಂದಿನ ಎರಡು ಸುತ್ತಿನ ಮತದಾನವು ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗುತ್ತದೆ.