ಬರ್ಲಿನ್: ಕೊರೊನಾ ವೈರಸ್ ಪರಿಣಾಮದಿಂದ ದೇಶದ ಅರ್ಥವ್ಯವಸ್ಥೆ ಕುಸಿದಿದದ್ದಕ್ಕೆ ನೊಂದು ಜರ್ಮನಿಯ ಹಣಕಾಸುವ ಸಚಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ರೈಲ್ವೇ ಟ್ರ್ಯಾಕ್ ಬಳಿ ವಿತ್ತ ಸಚಿವರ ಮೃತ ದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಥಾಮಸ್ ಶೇಫರ್ ಆತ್ಮಹತ್ಯೆಗೆ ಶರಣಾದ ಹೆಸ್ಸೆ ರಾಜ್ಯದ ಹಣಕಾಸು ಸಚಿವ. ಕೊರೊನಾ ವೈರಸ್ ನಿಂದ ದೇಶದಲ್ಲಿ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದವು. ಆರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಶೇಫರ್ ಹಗಲಿರುಳು ಕೆಲಸ ಮಾಡುತ್ತಿದ್ದರು. ಆದ್ರೂ ಹೆಸ್ಸೆ ಅರ್ಥ ವ್ಯವಸ್ಥೆಯಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ.
ಜರ್ಮನಿಯಲ್ಲಿ 50 ಸಾವಿರಕ್ಕೂ ಅಧಿಕ ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದರೆ. 400 ಅಧಿಕ ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹೆಸ್ಸೆ ರಾಜ್ಯದ ಮುಖ್ಯಮಂತ್ರಿ ವಾಲ್ಕರ್, ಸಾವಿನ ಸುದ್ದಿ ನಂಬಲು ಆಗುತ್ತಿಲ್ಲ. ಶೇಫರ್ ಆತ್ಮಹತ್ಯೆ ಮಾಡಿಕೊಂಡರು ಎಂದು ನಂಬಲು ಆಗುತ್ತಿಲ್ಲ ಎಂದಿದ್ದಾರೆ.