International

ಕೋವಿಡ್ 19 ಬೂಸ್ಟರ್ ಡೋಸ್ ಪಡೆದ ಜೋ ಬೈಡನ್

Published

on

Share this

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಕೋವಿಡ್ 19 ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದಾರೆ. ತಮ್ಮ ಅಧಿಕೃತ ನಿವಾಸ ಶ್ವೇತ ಭವನದಲ್ಲಿ ಬೈಡನ್ ಫೈಜರ್ ಲಸಿಕೆಯ ಮೂರನೇ ಡೋಸ್ ಪಡೆದುಕೊಂಡರು.

ಲಸಿಕೆ ತೆಗೆದುಕೊಂಡ ಬಳಿಕ ಮಾತನಾಡಿದ 78 ವರ್ಷದ ಬೈಡನ್, ನಾನು 65 ವರ್ಷ ಮೇಲ್ಪಟ್ಟ ವ್ಯಕ್ತಿ ಎಂದು ಹೇಳಿ ನಗೆ ಚಟಾಕಿ ಹಾರಿಸಿದರು. ಇದನ್ನೂ ಓದಿ:  ಫಸ್ಟ್ ಟೈಂ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್

ಅಮೆರಿಕದ ಶೇ.77 ರಷ್ಟು ಜನ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಆದರೆ ಇದು ಏನೇನು ಸಾಲದು. ಎಲ್ಲರೂ ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ. ಕಳೆದ ಡಿಸೆಂಬರ್ 21 ರಂದು ಮೊದಲ, ಜನವರಿ 11 ರಂದು ಬೈಡನ್ ಎರಡನೇ ಡೋಸ್ ಪಡೆದಿದ್ದರು.

ಕÀಳೆದ ವಾರ ವೃದ್ಧರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡುವಂತೆ ಅಮೆರಿಕದ ರೋಗಗಳ ನಿಯಂತ್ರಣ ಕೇಂದ್ರ (ಸಿಡಿಸಿ) ಶಿಫಾರಸು ಮಾಡಿತ್ತು. ಇದನ್ನೂ ಓದಿ: ಡೋಣಿ ನದಿ ಸೇತುವೆಯಲ್ಲಿ ಬಿರುಕು – ಆಗಮಿಸಲಿದ್ದಾರೆ ದೆಹಲಿ ಎಂಜಿನಿಯರ್‌ಗಳು

ನಸಿರ್ಂಗ್ ಹೋಂಗಳಲ್ಲಿ ದಾಖಲಾದವರು, 65 ವರ್ಷಕ್ಕಿಂತ ಮೇಲ್ಪಟ್ಟವರು, ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ 50-64 ವಯೋಮಾನದವರಿಗೆ ಬೂಸ್ಟರ್ ಡೋಸ್ ನೀಡಬೇಕು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿತ್ತು.

ಫೈಜರ್ ಕಂಪನಿಯ ಲಸಿಕೆ ತೆಗೆದುಕೊಂಡು ಕನಿಷ್ಠ 6 ತಿಂಗಳು ಆಗಿದ್ದರೆ, ಅಂಥವರಿಗೆ ಬೂಸ್ಟರ್ ಡೋಸ್ ನೀಡಬೇಕು ಎಂದು ಸಮಿತಿ ಹೇಳಿದೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications